AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವ ಸಂಪುಟದಲ್ಲಿ ಯಾರಿಗೆಲ್ಲಾ ಸ್ಥಾನ? ಡಿಸಿಎಂ ಯಾರು? ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಿಷ್ಟು

ಸಚಿವ ಸಂಪುಟದಲ್ಲಿ ಯಾರಿಗೆಲ್ಲಾ ಸ್ಥಾನ? ಡಿಸಿಎಂ ಯಾರು? ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಿಷ್ಟು

ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on:May 31, 2026 | 12:17 PM

Share

ಜಿಲ್ಲೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಹತ್ವದ ಹೇಳಿಕೆ ನೀಡಿದ್ದು, ರಾಜ್ಯದಲ್ಲಿ ಸದ್ಯಕ್ಕೆ ಮೊದಲ ಹಂತದಲ್ಲಿ ಸಚಿವರ ಪ್ರಮಾಣವಚನ ನಡೆಯಲಿದ್ದು, ಅದಾದ 15 ದಿನ ಅಥವಾ ಒಂದು ತಿಂಗಳ ನಂತರ ಮತ್ತೊಮ್ಮೆ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಸಿಎಂ ಜೊತೆ ಎಷ್ಟು ಜನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂಬ ಪ್ರಸ್ತಾಪ ಇನ್ನೂ ಬಂದಿಲ್ಲ. ಪ್ರಸ್ತಾಪ ಬಂದ ಬಳಿಕವೇ ಡಿಸಿಎಂ ಹಾಗೂ ಸಚಿವರ ಸಂಖ್ಯೆ ತೀರ್ಮಾನವಾಗಲಿದೆ. ಜೂನ್ 3ರ ನಂತರ ಈ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು. ಇನ್ನು ಡಿಕೆಶಿ ಸಿಎಂ ಆದ ಬಳಿಕ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಸಹಜ. ಮುಂಬರುವ ಚುನಾವಣೆ ದೃಷ್ಟಿಯಿಂದ ಎಲ್ಲರನ್ನೂ ಒಗ್ಗಟ್ಟಾಗಿ ಕೊಂಡೊಯ್ಯುವ, ಸಿಎಂ ಜೊತೆ ಉತ್ತಮ ಸಮನ್ವಯ ಹೊಂದಿರುವ ಸೂಕ್ತ ನಾಯಕನನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಲಾಗುವುದು ಎಂದು ಖರ್ಗೆ ಸ್ಪಷ್ಟಪಡಿಸಿದ್ದಾರೆ.

ಕಲಬುರಗಿ, ಮೆ 31: ಜಿಲ್ಲೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಹತ್ವದ ಹೇಳಿಕೆ ನೀಡಿದ್ದು, ರಾಜ್ಯದಲ್ಲಿ ಸದ್ಯಕ್ಕೆ ಮೊದಲ ಹಂತದಲ್ಲಿ ಸಚಿವರ ಪ್ರಮಾಣವಚನ ನಡೆಯಲಿದ್ದು, ಅದಾದ 15 ದಿನ ಅಥವಾ ಒಂದು ತಿಂಗಳ ನಂತರ ಮತ್ತೊಮ್ಮೆ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಸಿಎಂ ಜೊತೆ ಎಷ್ಟು ಜನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂಬ ಪ್ರಸ್ತಾಪ ಇನ್ನೂ ಬಂದಿಲ್ಲ. ಪ್ರಸ್ತಾಪ ಬಂದ ಬಳಿಕವೇ ಡಿಸಿಎಂ ಹಾಗೂ ಸಚಿವರ ಸಂಖ್ಯೆ ತೀರ್ಮಾನವಾಗಲಿದೆ. ಜೂನ್ 3ರ ನಂತರ ಈ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು. ಇನ್ನು ಡಿಕೆಶಿ ಸಿಎಂ ಆದ ಬಳಿಕ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಸಹಜ. ಮುಂಬರುವ ಚುನಾವಣೆ ದೃಷ್ಟಿಯಿಂದ ಎಲ್ಲರನ್ನೂ ಒಗ್ಗಟ್ಟಾಗಿ ಕೊಂಡೊಯ್ಯುವ, ಸಿಎಂ ಜೊತೆ ಉತ್ತಮ ಸಮನ್ವಯ ಹೊಂದಿರುವ ಸೂಕ್ತ ನಾಯಕನನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಲಾಗುವುದು ಎಂದು ಖರ್ಗೆ ಸ್ಪಷ್ಟಪಡಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published on: May 31, 2026 12:06 PM

Follow Us