ದೆಹಲಿಗೆ ಆಗಮಿಸಿದ ಶಿವಕುಮಾರ್ ಸಂಪುಟ ಪುನಾರಚನೆ ಸಿಎಂ ವಿವೇಚನೆಗೆ ಬಿಟ್ಟ ವಿಷಯವೆಂದರು

ದೆಹಲಿಗೆ ಆಗಮಿಸಿದ ಶಿವಕುಮಾರ್ ಸಂಪುಟ ಪುನಾರಚನೆ ಸಿಎಂ ವಿವೇಚನೆಗೆ ಬಿಟ್ಟ ವಿಷಯವೆಂದರು

ಅರುಣ್​ ಕುಮಾರ್​ ಬೆಳ್ಳಿ
|

Updated on: Nov 26, 2024 | 7:13 PM

ಯಾವುದಾದರೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲಾಗುತ್ತದೆಯೇ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿಕೆ ಶಿವಕುಮಾರ್, ಯಾವುದನ್ನೂ ನಿಲ್ಲಿಸುವುದಿಲ್ಲ ಎಲ್ಲವೂ ಮುಂದುವರಿಯುತ್ತವೆ ಎಂದು ಹೇಳಿದರು. ಒಂದೆರಡು ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ನಿಲ್ಲಿಸಲಿದೆ ಎಂಬ ಮಾತು ರಾಜ್ಯದಲ್ಲಿ ಪದೇಪದೆ ಕೇಳಿಬರುತ್ತಿದೆ.

ದೆಹಲಿ: ರಾಷ್ಟ್ರದ ರಾಜಧಾನಿಗೆ ಆಗಮಿಸಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಕೇಂದ್ರ ಅರಣ್ಯ, ಪರಿಸರ ಖಾತೆ ಸಚಿವರನ್ನು ಭೇಟಿಯಾಗಬೇಕಿದೆ, ಸಚಿವ ಪ್ರಲ್ಹಾದ್ ಜೋಶಿಯವರ ಅಪಾಯಿಂಟ್ಮೆಂಟ್ ಸಹ ಕೇಳಿರುವೆ, ನಾಳೆ ಸಾಯಂಕಾಲ ರಾಂಚಿಗೆ ತೆರಳಿ ಜಾರ್ಖಂಡ್ ಮುಖ್ಯಮಂತ್ರಿಯವರ ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗಿಯಾಗುವೆ ಎಂದು ಹೇಳಿದರು. ಸಚಿವ ಸಂಪುಟ ಪುನಾರಚನೆ ಮುಖ್ಯಮಂತ್ರಿ ಮತ್ತು ಪಕ್ಷದ ಹೈಕಮಾಂಡ್​ಗೆ ಬಿಟ್ಟ ವಿಚಾರ ಆದರೆ, ನಿಗಮ ಮತ್ತು ಮಂಡಳಿಗಳ ಅಧ್ಯಕ್ಷರುಗಳಿಗೆ ರಾಜೀನಾಮೆ ಸಲ್ಲಿಸುವಂತೆ ಸೂಚಿಸಲಾಗಿದೆ ಎಂದು ಶಿವಕುಮಾರ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಗ್ಯಾರಂಟಿ, ಅಭಿವೃದ್ಧಿ ಕೆಲಸಗಳನ್ನು ಮೆಚ್ಚಿ ಜನರು ಮತ ನೀಡಿದ್ದಾರೆ: ಡಿಕೆ ಶಿವಕುಮಾರ್​