ಬೆಂಗಳೂರು ದಕ್ಷಿಣಕ್ಕೊಂದು ಬೆಂಗಳೂರು ಉತ್ತರ ಬೇಡವೇ? ನಾಳೆ ಸಂಪುಟ ಸಭೆಯಲ್ಲಿ ನಿರ್ಧಾರ

Updated on: Jul 01, 2025 | 1:58 PM

ಬೆಂಗಳೂರು ಗ್ರಾಮಾಂತರ ಜಿಲ್ಲೆಯು ನಾಲ್ಕು ತಾಲೂಕುಗಳನ್ನು-ನೆಲಮಂಗಲ, ದೇವನಹಳ್ಳಿ, ಹೊಸಕೋಟೆ, ದೊಡ್ಡಬಳ್ಳಾಪುರ ಹೊಂದಿದೆ. ರಾಮನಗರ ಜಿಲ್ಲೆಯವರೇ ಆಗಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಠಕ್ಕೆ ಬಿದ್ದವರಂತೆ ತಮ್ಮ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಿಸಿದ್ದರು. ಉತ್ತರ, ದಕ್ಷಿಣ ಅಂತ ಹೆಸರಿಡುವ ಬದಲು ಹೊಸ ಮಾಡರ್ನ್ ಹೆಸರುಗಳನ್ನು ಆಯ್ದುಕೊಂಡಿದ್ದರೆ ಚೆನ್ನಾಗಿತ್ತೇನೋ?

ಬೆಂಗಳೂರು, ಜುಲೈ 1: ಹಲವು ಸಂಕಷ್ಟಗಳಲ್ಲಿ ಸಿಲುಕಿರುವ ಸಿದ್ದರಾಮಯ್ಯ ಸರ್ಕಾರ (Siddaramaiah government) ಜನರ ಗಮನ ಬೇರೆಡೆ ಸೆಳೆಯಲು ಇದನ್ನು ಮಾಡುತ್ತಿದ್ದೆಯೇ ಅಂತ ಕನ್ನಡಿಗರಲ್ಲಿ ಅನುಮಾನ ಮೂಡಿರಲಿಕ್ಕೂ ಸಾಕು. ಜಿಲ್ಲೆಗಳ ಹೆಸರು ಬದಲಾಯಿಸುವುದು ಸಹ ಅಭಿವೃದ್ಧಿಯ ದ್ಯೋತಕ ಅಂತ ಸರ್ಕಾರ ಭಾವಿಸಿರುವ ಸಾಧ್ಯತೆಯೂ ಇದೆ. ವಿಷಯವೇನೆಂದರೆ ರಾಜ್ಯ ಸರ್ಕಾರ ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಅಂತ ಬದಲಾಯಿಸಿದ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಸರನ್ನು ಬೆಂಗಳೂರು ಉತ್ತರ ಎಂದು ಮರುನಾಮಕರಣ ಬಗ್ಗೆ ಗಂಭೀರವಾಗಿ ಯೋಚನೆ ಮಾಡುತ್ತಿದ್ದು ನಾಳೆ ನಡೆಯಲಿರುವ ಸಂಪುಟ ಸಭೆಯಲ್ಲಿ ಪ್ರಸ್ತಾಪಕ್ಕೆ ಅನುಮೋದನೆ ಪಡೆದುಕೊಳ್ಳುವ ಸಾಧ್ಯತೆಯಿದೆ.

ಇದನ್ನೂ ಓದಿ:  ರಾಮನಗರ ಜಿಲ್ಲೆ ಹೆಸರು ಬದಲಾವಣೆಗೆ ಸಂಪುಟ ಒಪ್ಪಿಗೆ: ಹಠ ಸಾಧಿಸಿ ಗೆದ್ದ ಡಿಕೆ ಶಿವಕುಮಾರ್

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ