ಜಾತಿ ಗಣತಿ ವರದಿ: ಯಾವುದೇ ತೀರ್ಮಾವಿಲ್ಲದೆ ಮುಗಿದ ಸಂಪುಟ ಸಭೆ, ಮುಂದಿನ ಸಭೆಯಲ್ಲಿ ತೀರ್ಮಾನ?

ಅರುಣ್​ ಕುಮಾರ್​ ಬೆಳ್ಳಿ

Updated on: Apr 17, 2025 | 8:21 PM

ಎಲ್ಲರ ಅಭಿಪ್ರಾಯಗಳನ್ನು ಸಂಗ್ರಹಿಸಿದ ಬಳಿಕ ಮುಂದಿನ ಸಂಪುಟ ಸಭೆಯಲ್ಲಿ ಒಂದು ತೀರ್ಮಾನವನ್ನು ಸರ್ಕಾರ ತೆಗೆದುಕೊಳ್ಳಬಹುದು ಎಂದು ರಾಮಲಿಂಗಾರೆಡ್ಡಿ ಹೇಳುತ್ತಾರೆ. ಆದರೆ, ಹಿರಿಯ ನಾಯಕ ಮತ್ತು ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪನವರ ಹೇಳಿಕೆ ಸರ್ಕಾರದ ಮುಂದಿನ ಆಲೋಚನೆಗಳ ಮೇಲೆ ತಡೆಯೊಡ್ಡಿದೆ ಅನ್ನೋದು ಸುಳ್ಳಲ್ಲ.

ಬೆಂಗಳೂರು, ಏಪ್ರಿಲ್ 17: ಇವತ್ತಿನ ಸಂಪುಟ ಸಭೆ ಬಹಳ ಮಹತ್ವದ್ದು ಅಂತ ಹೇಳಲಾಗಿತ್ತು, ಆದರೆ ಅದು ಎಂದಿನಂತೆ ನಡೆದಿದ್ದು ಜಾತಿ ಗಣತಿ ವರದಿ ಬಗ್ಗೆ ಸರ್ಕಾರದ ನಿಲುವನ್ನು ಕುತೂಹಲದಿಂದ ಕಾಯುತ್ತಿದ್ದ ಜನರಿಗೆ ಭ್ರಮನಿರಸನವಾಗಿದೆ. ಸಭೆಯ ಬಳಿಕ ಮಾಧ್ಯಮದವರೊಂದಿಗೆ ಮಾತಾಡಿದ ಹಿರಿಯ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಅವರು, ಸಭೆಯಲ್ಲಿ ಜಾತಿ ಗಣತಿ ವರದಿಯ ಬಗ್ಗೆ ಚರ್ಚೆ ಆಗಿದೆ, ಮುಖ್ಯಮಂತ್ರಿಯವರು ಎಲ್ಲರ ಅಭಿಪ್ರಾಯಗಳನ್ನು ಕೇಳಿದ್ದಾರೆ, ಅಭಿಪ್ರಾಯಗಳನ್ನು ಮೌಖಿಕವಾಗಿಯಾದರೂ ನೀಡಬಹುದು ಇಲ್ಲವೇ ಲಿಖಿತ ರೂಪದಲ್ಲಿ, ಮುಂದಿನ ಸಂಪುಟ ಸಭೆಯೊಳಗೆ ತಿಳಿಸಲು ಹೇಳಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ:  ಜಾತಿ ಗಣತಿ ವರದಿ ಜಾರಿಗೆ ವಿರೋಧ: ಒಕ್ಕಲಿಗ, ವೀರಶೈವ ಲಿಂಗಾಯತ ಒಟ್ಟಿಗೆ ಹೋರಾಟ

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.