ಬೆಂಗಳೂರು: ಕಾವೇರಿ ನೀರಿನ ವಿಚಾರದಲ್ಲಿ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ; ಹೆಚ್​ಕೆ ಪಾಟೀಲ್ ಹೇಳಿದ್ದಿಷ್ಟು

| Updated By: ಕಿರಣ್ ಹನುಮಂತ್​ ಮಾದಾರ್

Updated on: Aug 19, 2023 | 11:05 PM

ಕೆಆರ್​ಎಸ್​ ಡ್ಯಾಂನಿಂದ (KRS Dam) ತಮಿಳುನಾಡಿಗೆ ನೀರು ಬಿಡುಗಡೆ ಮಾಡಿದ ವಿಚಾರಕ್ಕೆ ರಾಜ್ಯದಲ್ಲಿ ಮತ್ತೆ ಭುಗಿಲೆದ್ದಿದೆ. ಈ ಹಿನ್ನಲೆ ಇದೇ ವಿಷಯವಾಗಿ ಇಂದು(ಆ.19) ನಡೆದ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗಿದ್ದು, ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಸಚಿವ ಹೆಚ್​​.ಕೆ.ಪಾಟೀಲ್ ಹೇಳಿದ್ದಿಷ್ಟು.

ಬೆಂಗಳೂರು, ಆ.19: ರಾಜ್ಯದಲ್ಲಿ ಕೆಆರ್​ಎಸ್​ ಡ್ಯಾಂನಿಂದ (KRS Dam) ತಮಿಳುನಾಡಿಗೆ ನೀರು ಬಿಡುಗಡೆ ಮಾಡಿದ ವಿಚಾರವಾಗಿ ಮತ್ತೆ ಭುಗಿಲೆದ್ದಿದೆ. ಈ ಬಾರಿ ಮುಂಗಾರು ಮಳೆ ಸರಿಯಾಗಿ ಆಗದ ಹಿನ್ನಲೆ ಡ್ಯಾಂಗಳೇ ಭರ್ತಿಯಾಗಿಲ್ಲ. ಹೀಗಿರುವಾಗ, ತಮಿಳುನಾಡಿಗೆ ನೀರು ಬಿಡಬೇಕು ಎಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಹೇಳಿದೆ. ಇದೇ ವಿಷಯವಾಗಿ ಇಂದು(ಆ.19) ನಡೆದ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ್ದು, ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಸಚಿವ ಹೆಚ್​​.ಕೆ.ಪಾಟೀಲ್(HK Patil) ‘ಕಾವೇರಿ ನೀರು ತಮಿಳುನಾಡಿಗೆ ಬೀಡುವ ವಿಚಾರವಾಗಿ ಚರ್ಚೆ ಮಾಡಲಾಗಿದೆ. ಈ ಕುರಿತು ಸೋಮವಾರ ನಮ್ಮ ಮನವಿಯನ್ನು ಸುಪ್ರೀಂ ಕೋರ್ಟ್​ಗೆ ಸಲ್ಲಿಸುತ್ತೇವೆ ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Aug 19, 2023 11:04 PM