AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ; ರಾಜ್ಯಸಭೆಯಲ್ಲಿ ಭಾರೀ ಗದ್ದಲ

ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ; ರಾಜ್ಯಸಭೆಯಲ್ಲಿ ಭಾರೀ ಗದ್ದಲ

ಸುಷ್ಮಾ ಚಕ್ರೆ
|

Updated on: Aug 12, 2026 | 8:21 PM

Share

ಸಿಪಿಎಂ ಸಂಸದ ಜಾನ್ ಬ್ರಿಟಾಸ್ ವಿರುದ್ಧ ಬಿಜೆಪಿ ಸಂಸದೆ ಸುಶ್ಮಿತಾ ದೇವ್ ಅವರು 'ಲುಂಗಿವಾಲಾ' ಎಂಬ ನಿಂದನಾತ್ಮಕ ಪದ ಬಳಸಿದ್ದಾರೆ ಎಂಬ ಆರೋಪದ ಮೇಲೆ ತೀವ್ರ ಗದ್ದಲ ಉಂಟಾದ ಹಿನ್ನೆಲೆಯಲ್ಲಿ, ಇಂದು ರಾಜ್ಯಸಭೆಯ ಕಲಾಪವನ್ನು ಮುಂದೂಡಲಾಯಿತು. ಬ್ರಿಟಾಸ್ ಅವರ ಈ ಆರೋಪಕ್ಕೆ ವಿರೋಧ ಪಕ್ಷಗಳಿಂದ ಭಾರಿ ಬೆಂಬಲ ವ್ಯಕ್ತವಾದರೆ, ಆಡಳಿತ ಪಕ್ಷದ ಸದಸ್ಯರು ಯಾವುದೇ ಆದೇಶ ಹೊರಡಿಸುವ ಮುನ್ನ ಸುಶ್ಮಿತಾ ದೇವ್ ಅವರ ಮಾತನ್ನು ಆಲಿಸಬೇಕು ಎಂದು ಆಗ್ರಹಿಸಿದರು.

ನವದೆಹಲಿ, ಆಗಸ್ಟ್ 12: ರಾಜ್ಯಸಭೆಯಲ್ಲಿ ತಾವು ಮಾತನಾಡುತ್ತಿದ್ದಾಗ ಬಿಜೆಪಿ (BJP) ಸಂಸದೆ ಸುಶ್ಮಿತಾ ದೇವ್ ತಮ್ಮ ಉಡುಪಿನ ಬಗ್ಗೆ ಅಪಹಾಸ್ಯಕಾರಿ ಹೇಳಿಕೆ ನೀಡಿದ್ದಾರೆ ಎಂದು ಸಿಪಿಎಂ ಸಂಸದ ಜಾನ್ ಬ್ರಿಟಾಸ್ ಇಂದು ಆರೋಪಿಸಿದ್ದು, ಈ ವಿಚಾರ ಸದನದಲ್ಲಿ ಭಾರಿ ಗದ್ದಲಕ್ಕೆ ಕಾರಣವಾಗಿ ಕಲಾಪವನ್ನು ಮುಂದೂಡಲಾಯಿತು. ಬಿಜೆಪಿ ಸಂಸದೆ ತಮ್ಮನ್ನು ಲುಂಗಿವಾಲಾ ಎಂದು ಕರೆದಿದ್ದಾರೆ ಎಂದು ಆರೋಪಿಸಿದ ಬ್ರಿಟಾಸ್, ಈ ಹೇಳಿಕೆಯು ತಮ್ಮ ಪ್ರಾದೇಶಿಕ ಅಸ್ಮಿತೆಯನ್ನು ತಾರತಮ್ಯದಿಂದ ನೋಡುವಂತಿದೆ ಎಂದು ಹೇಳಿದರು.

ಬ್ರಿಟಾಸ್ ಅವರ ಆರೋಪದ ನಂತರ, ಈ ಘಟನೆಗೆ ಸಂಬಂಧಿಸಿದಂತೆ ಸುಶ್ಮಿತಾ ದೇವ್ ಅವರಿಗೂ ತಮ್ಮ ವಿವರಣೆ ನೀಡಲು ಅವಕಾಶ ನೀಡಬೇಕು ಎಂದು ಬಿಜೆಪಿ ಸದಸ್ಯರು ಆಗ್ರಹಿಸಿದರು. ಕೇಂದ್ರ ಸಚಿವ ಜೆ.ಪಿ. ನಡ್ಡಾ ಮಾತನಾಡಿ, ಬ್ರಿಟಾಸ್ ಅವರ ಹೇಳಿಕೆ ಈಗ ದಾಖಲಾಗಿದೆ ಮತ್ತು ಯಾರ ವಿರುದ್ಧ ಆರೋಪ ಮಾಡಲಾಗಿದೆಯೋ ಆ ಸದಸ್ಯರಿಗೂ ಉತ್ತರಿಸಲು ಅವಕಾಶ ನೀಡಬೇಕು ಎಂದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More