ಬಹಿರಂಗ ಪ್ರಚಾರಕ್ಕೆ ಇಂದು ಕೊನೆ, ಚನ್ನಪಟ್ಟಣದಲ್ಲಿ ಪತಿಯ ಪರ ಮತ ಯಾಚಿಸುತ್ತಿರುವ ರೇವತಿ ನಿಖಿಲ್

ಅರುಣ್​ ಕುಮಾರ್​ ಬೆಳ್ಳಿ

Updated on: Nov 11, 2024 | 11:23 AM

ಸಂಕೋಚ ಸ್ವಭಾವದ ರೇವತಿ ನಿಖಿಲ್ ಟಿವಿ9 ನೊಂದಿಗೆ ಹೆಚ್ಚು ಮಾತಾಡಲಿಲ್ಲ. ನನ್ನ ಪತಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ, ಅವರಿಗೊಂದು ಅವಕಾಶ ಕೊಡಿ ಎಂದು ಜನರನ್ನು ಕೇಳುತ್ತಿದ್ದೇನೆ ಎಂದಷ್ಟೇ ಎಂದು ರೇವತಿ ಹೇಳಿದರು. ನಿಖಿಲ್ ಗಾಗಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಪ್ರಮುಖ ನಾಯಕರು ಪ್ರಚಾರ ಮಾಡಿದ್ದಾರೆ.

ರಾಮನಗರ: ರಾಜ್ಯದ ಮೂರು ಉಪ ಚುನಾವಣೆಗಳಿಗೆ ಇಂದು ಬಹಿರಂಗ ಪ್ರಚಾರ ಕೊನೆಗೊಳ್ಳಲಿದೆ. ಚನ್ನಪಟ್ಟಣದಲ್ಲಿ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರ ಅವರ ಪತ್ನಿ ರೇವತಿ ನಿಖಿಲ್ ಪಾದಯಾತ್ರೆ ಮಾಡುತ್ತಾ ಜನರನ್ನು ಭೇಟಿಯಾಗಿ ಮತ ಯಾಚಿಸುತ್ತಿದ್ದಾರೆ. ಶಾಲಾ ಮಕ್ಕಳನ್ನು ಅವರು ಭೇಟಿಯಾಗುತ್ತಿರೋದು ಸ್ವಲ್ಪ ಆಶ್ಚರ್ಯ ಮೂಡಿಸುತ್ತದೆ. ನಮ್ಮ ವರದಿಗಾರ ಹೇಳುವಂತೆ ಇವತ್ತು ಮತ್ತು ನಾಳೆ ಮನೆಮನೆಗಳಿಗೆ ಭೇಟಿ ನೀಡಿ ಜನರ ಮತ ಕೇಳುವುದು ಬಹಳ ಮುಖ್ಯವಾಗುತ್ತದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಚನ್ನಪಟ್ಟಣದಲ್ಲಿ ಡಿಕೆ ಶಿವಕುಮಾರ್ ಅಬ್ಬರದ ಪ್ರಚಾರ, ಹರಕೆ ಕಟ್ಟಿದ ಯೋಗೇಶ್ವರ್: ನಿಖಿಲ್ ಪರ ಪ್ರಚಾರಕ್ಕಿಳಿದ ಪತ್ನಿ ರೇವತಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.