Siddaramaiah meets Sonia Gandhi: ದೆಹಲಿಯಲ್ಲಿ ಸೋನಿಯಾ ಗಾಂಧಿಯವರನ್ನು ಭೇಟಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ

Arun Kumar Belly

|

Updated on: May 26, 2023 | 11:40 AM

ಅನಾರೋಗ್ಯದಿಂದ ಚೇತರಿಸಿಕೊಂಡ ಬಳಿಕ ಶಿಮ್ಲಾದಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ಸೋನಿಯಾ ದೆಹಲಿಗೆ ವಾಪಸ್ಸಾಗಿದ್ದಾರೆ.

ದೆಹಲಿ: ರಾಜ್ಯ ಸಂಪುಟ ವಿಸ್ತರಣೆ ಕುರಿತಂತೆ 3-4 ದಿನಗಳಿಂದ ದೆಹಲಿಯಲ್ಲಿ ಠಿಕಾಣಿ ಹೂಡಿ ಎಐಸಿಸಿ ನಾಯಕರನ್ನು ಮೇಲಿಂದ ಮೇಲೆ ಭೇಟಿಯಾಗುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು (Siddaramaiah) ಇಂದು ಬೆಳಗ್ಗೆ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ (Sonia Gandhi) ಅವರನ್ನು ಭೇಟಿಯಾದರು. ಸಿದ್ದರಾಮಯ್ಯ ರಾಜ್ಯದ ಮುಖ್ಯಮಂತ್ರಿಯಾದ ಬಳಿಕ ಮೊದಲಬಾರಿಗೆ ಪಕ್ಷದ ಮಾಜಿ ಅಧ್ಯಕ್ಷೆಯನ್ನು ಭೇಟಿಯಾಗುತ್ತಿದ್ದಾರೆ. ಅನಾರೋಗ್ಯದಿಂದ ಚೇತರಿಸಿಕೊಂಡ ಬಳಿಕ ಶಿಮ್ಲಾದಲ್ಲಿ (Shimla) ವಿಶ್ರಾಂತಿ ಪಡೆಯುತ್ತಿದ್ದ ಸೋನಿಯಾ ದೆಹಲಿಗೆ ವಾಪಸ್ಸಾಗಿದ್ದಾರೆ. ನೀವು ಒಂದು ಸಂಗತಿಯನ್ನು ಗಮನಿಸರಬಹುದು, ಸಿಎಂ ಸಿದ್ದರಾಮಯ್ಯ ಎಲ್ಲೇ ಹೋಗಲಿ ವಿಧಾನ ಪರಿಷತ್ ಸದಸ್ಯ ಪ್ರಕಾಶ್ ರಾಠೋಡ್ ನೆರಳಿನಂತೆ ಹಿಂಬಾಲಿಸುತ್ತಾರೆ!

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Related Video

Follow us on

Click on your DTH Provider to Add TV9 Kannada