ಆ.13ರ ಕರ್ನಾಟಕ ಬಂದ್​​ಗೆ ಕ್ಯಾಮ್ಸ್​​ನಿಂದ ನೈತಿಕ ಬೆಂಬಲ ಮಾತ್ರ: ಖಾಸಗಿ ಶಾಲೆಗಳಿಗಿಲ್ಲ ರಜೆ!

Edited By:

Updated on: Aug 11, 2026 | 1:14 PM

ಗುರುವಾರ ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಸಂಬಂಧಿಸಿದಂತೆ ಬೆಂಗಳೂರಿನ ಖಾಸಗಿ ಶಾಲೆಗಳಿಗೆ ರಜೆ ಇರುವುದಿಲ್ಲ ಎಂದು ಕ್ಯಾಮ್ಸ್ ಸಂಘಟನೆ ಸ್ಪಷ್ಟಪಡಿಸಿದೆ. ಮಕ್ಕಳ ಹಿತದೃಷ್ಟಿಯಿಂದ ಬಂದ್‌ನಿಂದ ಹೊರಗುಳಿದಿರುವ ಖಾಸಗಿ ಶಾಲೆಗಳು ನೈತಿಕ ಬೆಂಬಲ ಮಾತ್ರ ನೀಡಲಿವೆ. ಶಿಕ್ಷಕರು ಮತ್ತು ಸಿಬ್ಬಂದಿ ಕಪ್ಪು ಪಟ್ಟಿ ಧರಿಸುವ ಮೂಲಕ ನೈತಿಕ ಬೆಂಬಲ ವ್ಯಕ್ತಪಡಿಸಲಿದ್ದಾರೆ ಎಂದು ಕ್ಯಾಮ್ಸ್ ತಿಳಿಸಿದೆ.

ಬೆಂಗಳೂರು, ಆಗಸ್ಟ್​​ 11: ಕಾವೇರಿ ಜಲವಿವಾದ ಸಂಬಂಧ ಕನ್ನಡಪರ ಸಂಘಟನೆಗಳು ಗುರುವಾರ, ಅಂದರೆ ಆಗಸ್ಟ್ 13ರಂದು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಆರಂಭದಲ್ಲಿ ಬೆಂಬಲ ಸೂಚಿಸಿದ್ದ ಖಾಸಗಿ ಶಾಲಾ ಆಡಳಿತ ಮಂಡಳಿಗಳ ಸಂಘಟನೆ (ಕ್ಯಾಮ್ಸ್) ಈಗ ತನ್ನ ನಿರ್ಧಾರವನ್ನು ಬದಲಾಯಿಸಿದ್ದು, ಕೇವಲ ನೈತಿಕ ಬೆಂಬಲ ನೀಡಲು ಮುಂದಾಗಿದೆ. ಹೀಗಾಗಿ ಅಂದು ಬೆಂಗಳೂರಿನ ಖಾಸಗಿ ಶಾಲೆಗಳಿಗೆ ರಜೆ ಇರುವುದಿಲ್ಲ ಎಂದು ಕ್ಯಾಮ್ಸ್ ಸ್ಪಷ್ಟಪಡಿಸಿದೆ. ಮಕ್ಕಳ ಹಿತದೃಷ್ಟಿಯಿಂದ ಬಂದ್​​ಗೆ ಬೆಂಬಲದಿಂದ ಹಿಂದೆ ಸರಿಯಲಾಗಿದೆ. ಶಿಕ್ಷಕರು ಮತ್ತು ಸಿಬ್ಬಂದಿ ಕಪ್ಪು ಪಟ್ಟಿ ಧರಿಸುವ ಮೂಲಕ ನೈತಿಕ ಬೆಂಬಲ ವ್ಯಕ್ತಪಡಿಸಲಿದ್ದಾರೆ ಎಂದು ಕ್ಯಾಮ್ಸ್ ತಿಳಿಸಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Aug 11, 2026 01:10 PM
Loading...
Unable to load recommendations.
Follow Us
ವಿನಯ್​ ಕಾಶಪ್ಪನವರ್​

ವಿನಯಕುಮಾರ್ ಕಾಶಪ್ಪನವರ್ ಅವರು ಸಮೂಹ ಸಂವಹನ ಹಾಗೂ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮತ್ತು ಪತ್ರಿಕೋದ್ಯಮದಲ್ಲಿ ವಿದ್ಯಾಭ್ಯಾಸ ಪಡೆದಿದ್ದಾರೆ. ಕಳೆದ 8 ವರ್ಷಗಳಿಂದ ಟಿವಿ9 ಕನ್ನಡದಲ್ಲಿ ಹಿರಿಯ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ 10 ವರ್ಷಗಳ ವರದಿಗಾರಿಕೆ ಅನುಭವ ಹೊಂದಿದ್ದು, ಸಮಾಜಮುಖಿ ಹಾಗೂ ತನಿಖಾ ವರದಿಗಳ ಮೂಲಕ ಜನಪರ ವಿಷಯಗಳನ್ನು ಬೆಳಕಿಗೆ ತರುತ್ತಿದ್ದಾರೆ.

Read More