ಮಲ್ಲಿಕಾರ್ಜುನ ಖರ್ಗೆ ಸ್ಪರ್ಧೆಯ ಬಗ್ಗೆ ಕಾಮೆಂಟ್ ಮಾಡುವ ಅರ್ಹತೆ ನನಗಿಲ್ಲ: ಜಿ ಪರಮೇಶ್ವರ್

ಮಲ್ಲಿಕಾರ್ಜುನ ಖರ್ಗೆ ಸ್ಪರ್ಧೆಯ ಬಗ್ಗೆ ಕಾಮೆಂಟ್ ಮಾಡುವ ಅರ್ಹತೆ ನನಗಿಲ್ಲ: ಜಿ ಪರಮೇಶ್ವರ್

ಅರುಣ್​ ಕುಮಾರ್​ ಬೆಳ್ಳಿ
|

Updated on:Mar 13, 2024 | 12:17 PM

ಬೆಂಗಳೂರಿನ ಮೂರು ಲೋಕಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಅಭ್ಯರ್ಥಿಗಳ ಕೊರತೆಯೇನೂ ಇಲ್ಲ, ಸಂಭಾವ್ಯ ಅಭ್ಯರ್ಥಿಗಳ ನಡುವೆ ಪೈಫೋಟಿ ಹೆಚ್ಚಿರುವುದರಿಂದ ನಿರ್ಧರಿಸುವುದಕ್ಕೆ ತಡವಾಗುತ್ತಿದೆ ಎಂದು ಹೇಳಿದರು. ಅಭ್ಯರ್ಥಿಗಳ ಹೆಸರು ಸ್ಕ್ರೀನಿಂಗ್ ಸಮಿತಿಯ ಮುಂದಿದೆ, ಸಮಿತಿಯ ಸದಸ್ಯರು ಗೆಲ್ಲಬಹುದಾದ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲಿದ್ದಾರೆ ಎಂದು ಪರಮೇಶ್ವರ್ ಹೇಳಿದರು.

ಬೆಂಗಳೂರು: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಗೃಹ ಸಚಿವ ಜಿ ಪರಮೇಶ್ವರ್ (G Parameshwara), ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಸಂಪುಟ ಸಭೆಯಲ್ಲಿ ಚರ್ಚಿಸಿ ಅಂಗೀಕರಿಸುವ ಇಲ್ಲವೇ ತಿರಸ್ಕರಿಸುವ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು. ಲೋಕಸಭಾ ಚುನಾವಣೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು ಸ್ಪರ್ಧಿಸುವ ಬಗ್ಗೆ ಕೇಳಿದ ಪ್ರಶ್ನೆಗೆ ಪರಮೇಶ್ವರ್ ಗೊಂದಲಮಯ ಪ್ರತಿಕ್ರಿಯೆ ನೀಡಿದರು. ಖರ್ಗೆ ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿರುವುದರಿಂದ ಅವರ ಅಥವಾ ಅವರ ಸ್ಪರ್ಧೆಯ ಬಗ್ಗೆ ತನಗೆ ಕಾಮೆಂಟ್ ಮಾಡಲಾಗದು ಆದರೆ ಅವರ ಮೇಲೆ ಕಾರ್ಯಕರ್ತರ ಒತ್ತಡವಿದೆ, ಅವರು ಸ್ಪರ್ಧಿಸಿದರೆ ಪಕ್ಷಕ್ಕೆ ದೊಡ್ಡ ಬಲ ಬಂದಂತಾಗುತ್ತದೆ ಎಂದು ಹೇಳಿದರು. ಬೆಂಗಳೂರಿನ ಮೂರು ಲೋಕಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಅಭ್ಯರ್ಥಿಗಳ ಕೊರತೆಯೇನೂ ಇಲ್ಲ, ಸಂಭಾವ್ಯ ಅಭ್ಯರ್ಥಿಗಳ ನಡುವೆ ಪೈಫೋಟಿ ಹೆಚ್ಚಿರುವುದರಿಂದ ನಿರ್ಧರಿಸುವುದಕ್ಕೆ ತಡವಾಗುತ್ತಿದೆ ಎಂದು ಹೇಳಿದರು. ಅಭ್ಯರ್ಥಿಗಳ ಹೆಸರು ಸ್ಕ್ರೀನಿಂಗ್ ಸಮಿತಿಯ ಮುಂದಿದೆ, ಸಮಿತಿಯ ಸದಸ್ಯರು ಗೆಲ್ಲಬಹುದಾದ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲಿದ್ದಾರೆ ಎಂದು ಪರಮೇಶ್ವರ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಡಿಕೆ ಶಿವಕುಮಾರ್ ಮನೆಯಲ್ಲಿ ಮಾತುಕತೆ ನಡೆಸಿ ಹೊರಬಂದ ಜಿ ಪರಮೇಶ್ವರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲಿಲ್ಲ

Published on: Mar 13, 2024 12:04 PM