AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್​​ ಪಲ್ಟಿ: ದೃಶ್ಯ ನೋಡಿದ್ರೆ ಎದೆ ಝಲ್​​ ಎನ್ನುತ್ತೆ!

ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್​​ ಪಲ್ಟಿ: ದೃಶ್ಯ ನೋಡಿದ್ರೆ ಎದೆ ಝಲ್​​ ಎನ್ನುತ್ತೆ!

ಪ್ರಜ್ವಲ್ ಅಮೀನ್​, ಉಡುಪಿ
| Edited By: |

Updated on:Dec 29, 2025 | 4:19 PM

Share

ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದಲ್ಲಿ ಭೀಕರ ಅಪಘಾತ ನಡೆದಿದೆ. ಸರಣಿ ಅಪಘಾತದ ವೇಳೆ ಪಾದಚಾರಿಮೇಲೆ ಕ್ಯಾಂಟರ್​​ ಮಗುಚಿ ಬಿದ್ದ ಪರಿಣಾಮ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾರಿಗೆ ಕ್ಯಾಂಟರ್​​ ಗುದ್ದಿ ಪಲ್ಟಿಯಾಗಿದೆ. ಹಿಂದೆ ಇದ್ದ ಮತ್ತೊಂದು ಕಾರು ಕೂಡ ಘಟನೆಯಲ್ಲಿ ಜಖಂ ಆಗಿದ್ದು, ಘಟನೆ ವಿಡಿಯೋ ವೈರಲ್​​ ಆಗಿದೆ.

ಉಡುಪಿ, ಡಿಸೆಂಬರ್​​ 29: ಸರಣಿ ಅಪಘಾತದ ವೇಳೆ ಪಾದಚಾರಿಮೇಲೆ ಕ್ಯಾಂಟರ್​​ ಮಗುಚಿ ಬಿದ್ದ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದಲ್ಲಿ ನಡೆದಿದೆ. ಲಾರಿ ಮತ್ತು ಕ್ಯಾಂಟರ್​​ ನಡುವೆ ಮೊದಲು ಡಿಕ್ಕಿಯಾಗಿದ್ದು, ಅಪಘಾತದ ರಭಸಕ್ಕೆ ಕ್ಯಾಂಟರ್​​ ಪಲ್ಟಿಯಾಗಿದೆ. ಈ ವೇಳೆ ಹಿಂಬದಿಯಲ್ಲಿ ಬರುತ್ತಿದ್ದ ಮತ್ತೊಂದು ಕಾರು ಕೂಡ ಜಖಂ ಆಗಿದೆ. ಕ್ಯಾಂಟರ್​​ ದಾವಣಗೆರೆಯಿಂದ ಮಂಗಳೂರಿಗೆ ಮೊಟ್ಟೆ ಸಾಗಿಸುತ್ತಿದ್ದರೆ, ಕಾರು ಬೆಳ್ಮಣ್​​ನಿಂದ ಕಾರ್ಕಳ ಕಡೆಗೆ ಬರುತ್ತಿತ್ತು. ಅಪಘಾತದಲ್ಲಿ ಪಾದಚಾರಿ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Dec 29, 2025 04:16 PM
Follow Us
Prajwal Amin
Prajwal Amin

ಪ್ರಜ್ವಲ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿರುತ್ತಾರೆ. ಉಡುಪಿ ಜಿಲ್ಲೆಯ ಸ್ಥಳೀಯ ಖಾಸಗಿ ಸುದ್ದಿವಾಹಿನಿಯ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ ಇವರು ಬಳಿಕ ಪ್ರಜಾವಾಣಿಯ ವರದಿಗಾರನಾಗಿ ಕೆಲಸ ಮಾಡಿರುತ್ತಾರೆ. ನಂತರ 6 ವರ್ಷ ಟಿ.ವಿ 5ನ ದಕ್ಷಿಣ ಕನ್ನಡ ಜಿಲ್ಲಾ ವರದಿಗಾರನಾಗಿ ನಂತರ ದಿಗ್ವಿಜಯ ನ್ಯೂಸ್ ನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವರದಿಗಾರನಾಗಿ ಕಾರ್ಯನಿರ್ವಾಹಸಿದ್ದಾರೆ. ಕಳೆದ ಹನ್ನೊಂದು ತಿಂಗಳಿನಿಂದ ಟಿ.ವಿ 9 ಸಂಸ್ಥೆಯಲ್ಲಿ ಉಡುಪಿ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಾಹಿಸುತ್ತಿದ್ದಾರೆ.

Read More