ಕೊನೆಗೂ ದಿ ಹಂಡ್ರೆಡ್​​​ನಲ್ಲಿ ಅಬ್ಬರಿಸಿದ ಕೇನ್ ವಿಲಿಯಮ್ಸನ್

Updated on: Aug 24, 2025 | 12:27 PM

London Spirit vs Southern Brave: ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕೇನ್ ವಿಲಿಯಮ್ಸನ್ 28 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 4 ಫೋರ್​ಗಳೊಂದಿಗೆ 53 ರನ್ ಬಾರಿಸಿದರು. ವಿಶೇಷ ಎಂದರೆ ಇದು ವಿಲಿಯಮ್ಸನ್ ಅವರ ಮೊದಲ ದಿ ಹಂಡ್ರೆಡ್ ಲೀಗ್ ಅರ್ಧಶತಕ. ಈ ಹಾಫ್ ಸೆಂಚುರಿ ನೆರವಿನೊಂದಿಗೆ ಲಂಡನ್ ಸ್ಪಿರಿಟ್ ತಂಡವು 100 ಎಸೆತಗಳಲ್ಲಿ 4 ವಿಕೆಟ್ ಕಳೆದುಕೊಂಡು 186 ರನ್ ಕಲೆಹಾಕಿತು.

ಇಂಗ್ಲೆಂಡ್​​ನಲ್ಲಿ ನಡೆಯುತ್ತಿರುವ ದಿ ಹಂಡ್ರೆಡ್ ಲೀಗ್​ನ ಕಳೆದ ನಾಲ್ಕು ಪಂದ್ಯಗಳಲ್ಲಿ ವಿಫಲರಾಗಿದ್ದ ಲಂಡನ್ ಸ್ಪಿರಿಟ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಕೊನೆಗೂ ಅಬ್ಬರಿಸಿದ್ದಾರೆ. ಈ ಅಬ್ಬರದೊಂದಿಗೆ ಲಂಡನ್ ಸ್ಪಿರಿಟ್ ತಂಡವು ತನ್ನ ಮೂರನೇ ಗೆಲುವು ದಾಖಲಿಸುವಲ್ಲಿ ಯಶಸ್ವಿಯಾಗಿದೆ.

ಲಾರ್ಡ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಲಂಡನ್ ಸ್ಪಿರಿಟ್ ಹಾಗೂ ಸದರ್ನ್ ಬ್ರೇವ್ ತಂಡಗಳು ಮುಖಾಮುಖಿಯಾಗಿದ್ದವು. ಟಾಸ್ ಗೆದ್ದ ಸದರ್ನ್ ಬ್ರೇವ್ ತಂಡದ ನಾಯಕ ಜೇಮ್ಸ್ ವಿನ್ಸ್ ಬೌಲಿಂಗ್ ಆಯ್ದುಕೊಂಡರು. ಅದರಂತೆ ಮೊದಲು ಬ್ಯಾಟ್ ಮಾಡಿದ ಲಂಡನ್ ಸ್ಪಿರಿಟ್ ತಂಡದ ಪರ ಜೇಮಿ ಸ್ಮಿತ್ ಕೇವಲ 18 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 4 ಫೋರ್​ಗಳೊಂದಿಗೆ 44 ರನ್ ಬಾರಿಸಿದರು.

ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕೇನ್ ವಿಲಿಯಮ್ಸನ್ 28 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 4 ಫೋರ್​ಗಳೊಂದಿಗೆ 53 ರನ್ ಬಾರಿಸಿದರು. ವಿಶೇಷ ಎಂದರೆ ಇದು ವಿಲಿಯಮ್ಸನ್ ಅವರ ಮೊದಲ ದಿ ಹಂಡ್ರೆಡ್ ಲೀಗ್ ಅರ್ಧಶತಕ. ಈ ಹಾಫ್ ಸೆಂಚುರಿ ನೆರವಿನೊಂದಿಗೆ ಲಂಡನ್ ಸ್ಪಿರಿಟ್ ತಂಡವು 100 ಎಸೆತಗಳಲ್ಲಿ 4 ವಿಕೆಟ್ ಕಳೆದುಕೊಂಡು 186 ರನ್ ಕಲೆಹಾಕಿತು.

187 ರನ್​ಗಳ ಗುರಿ ಬೆನ್ನತ್ತಿದ ಸದರ್ನ್ ಬ್ರೇವ್ ತಂಡವು 92 ಎಸೆತಗಳಲ್ಲಿ 139 ರನ್​​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಲಂಡನ್ ಸ್ಪಿರಿಟ್ ತಂಡವು 47 ರನ್​​ಗಳ ಭರ್ಜರಿ ಜಯ ಸಾಧಿಸಿತು.

 

 

Published on: Aug 24, 2025 12:27 PM