Car Accident: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಗುದ್ದಿದ ಕಾರು
ಇನೋವಾ ಕ್ರಿಸ್ಟಾ ಕಾರು ಡಿವೈಡರ್ ಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಕಾರು ಚಾಲಕ ವೇಗವಾಗಿ ಬಂದು ಡಿವೈಡರ್ ಗೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರ್ ನಲ್ಲಿದ್ದ ಎರಡು ಏರ್ ಬ್ಯಾಗ್ ಗಳು ಓಪನ್ ಆಗಿವೆ.
ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಗುದ್ದಿದ ಘಟನೆ ಬೆಂಗಳೂರಿನ ಮಲ್ಲೇಶ್ವರಂನ ಮಂತ್ರಿಮಾಲ್ ಬಳಿ ನಡೆದಿದೆ. ಕಾರು ಚಾಲಕ ಸೇರಿ ಇಬ್ಬರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಹೈಗ್ರೌಂಡ್ಸ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನೋವಾ ಕ್ರಿಸ್ಟಾ ಕಾರು ಡಿವೈಡರ್ ಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಕಾರು ಚಾಲಕ ವೇಗವಾಗಿ ಬಂದು ಡಿವೈಡರ್ ಗೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರ್ ನಲ್ಲಿದ್ದ ಎರಡು ಏರ್ ಬ್ಯಾಗ್ ಗಳು ಓಪನ್ ಆಗಿವೆ. ಚಾಲಕ ಸೇರಿ ಕಾರಿನಲ್ಲಿದ್ದ ಇಬ್ಬರಿಗೆ ಗಾಯಗಳಾಗಿವೆ.
ಕುಡಿದ ಅಮಲಿನಲ್ಲಿ ಸೆಲ್ಫ್ ಆಕ್ಸಿಡೆಂಟ್?
ಅಪಘಾತವಾದ ಕಾರಿನಲ್ಲಿ ಮದ್ಯ ಬಾಟಲಿ ಪತ್ತೆಯಾಗಿದೆ. ವಿಚಾರಣೆ ನಡೆಸಿದ ಪೊಲೀಸರು ಮದ್ಯ ಸೇವಿಸಿ ಕಾರು ಚಾಲನೆ ಮಾಡಿರುವ ಶಂಕೆ ವ್ಯಕ್ತಪಡಿಸಿದ್ದಾರೆ. ರಸ್ತೆ ಖಾಲಿಯಿದ್ದರೂ ಸೀದಾ ಬಂದು ಡಿವೈಡರ್ ಗೆ ಚಾಲಕ ಡಿಕ್ಕಿ ಹೊಡೆದಿದ್ದಾನೆ. ಹೀಗಾಗಿ ಚಾಲಕ ಮದ್ಯ ಸೇವಿಸಿ ಅಪಘಾತ ಮಾಡಿರುವ ಶಂಕೆ ವ್ಯಕ್ತವಾಗಿದೆ.