ಕಾಸರಗೋಡು: ಡಿವೈಡರ್ಗೆ ಡಿಕ್ಕಿಯಾದ ಕಾರು, ಮೂವರ ಸಾವು
ಮಂಗಳೂರಿನ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ವಾಮಂಜೂರು ಬಳಿ ಕಾರು ಡಿವೈಡರ್ಗೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜನಾರ್ದನ, ಅವರ ಪುತ್ರ ವರುಣ್ ಮತ್ತು ಕಿಶನ್ ಮೃತಪಟ್ಟವರು. ಕುಟುಂಬದ ಇನ್ನೊಬ್ಬ ಸದಸ್ಯೆ ರತ್ನಾ ಗಂಭೀರವಾಗಿ ಗಾಯಗೊಂಡಿದ್ದಾರೆ ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತರು ಉಪ್ಪಳದ ನಿವಾಸಿಗಳು. ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು, ಮಾರ್ಚ್ 04: ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ರಾಷ್ಟ್ರೀಯ ಹೆದ್ದಾರಿ 66ರಲ್ಲಿನ ವಾಮಂಜೂರು ಚೆಕ್ಪೋಸ್ಟ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್ಗೆ ಡಿಕ್ಕಿಯಾಗಿದೆ. ಸೋಮವಾರ ತಡರಾತ್ರಿ ಘಟನೆ ನಡೆದಿದೆ. ಕಾರಿನಲ್ಲಿದ್ದ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜನಾರ್ದನ, ಪುತ್ರ ವರುಣ್ ಹಾಗೂ ಕಿಶನ್ ಮೃತ ದುರ್ದೈವಿಗಳು. ರತ್ನಾ ಎಂಬುವರಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಉಪ್ಪಳದ ಪೈವಳಿಕೆ ಬಾಯಿಕಟ್ಟೆ ನಿವಾಸಿಗಳು ಎಂದು ತಿಳಿದುಬಂದಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರಿಗೆ ತೆರಳಬೇಕಿದ್ದ ಕಿಶನ್‌ರನ್ನು ಪೈವಳಿಕೆ ಬಾಯಿಕಟ್ಟೆಯಿಂದ ಕಾರಿನಲ್ಲಿ ಕರೆದೊಯ್ಯುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ 66ರ ವಾಮಂಜೂರು ಚೆಕ್ ಪೋಸ್ಟ್ ಬಳಿ ಕಾರು ಚಾಲಕನ ನಿಯಂತ್ರಣ ಡಿವೈಡರ್ಗೆ ಡಿಕ್ಕಿ ಹೊಡೆದಿದೆ . ಇದರಿಂದ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಅಪಘಾತದ ರಭಸಕ್ಕೆ ಮೂವರು ಸ್ಥಳದಲ್ಲೇ ಕೊನೆಯುಸಿರೆಳದಿದ್ದಾರೆ.