CCTV Video: ಬೈಕ್, ಕಾರು ನಡುವೆ ಭೀಕರ ಅಪಘಾತ, ಪವಾಡಸದೃಶವಾಗಿ ಪಾರಾದ ಸವಾರರು

ಬೈಕ್ ಮತ್ತು ಕಾರಿನ ಮಧ್ಯೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕಂಬಳಬೆಟ್ಟು ಎಂಬಲ್ಲಿ ಭೀಕರ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಯ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಅದೃಷ್ಟವಶಾತ್, ಸವಾರರು ಸಾವಿನಿಂದ ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದಾರೆ. ಸಿಸಿಟಿವಿ ವಿಡಿಯೋ ಇಲ್ಲಿದೆ ನೋಡಿ.

ಮಂಗಳೂರು, ನವೆಂಬರ್ 13: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕಂಬಳಬೆಟ್ಟು ಎಂಬಲ್ಲಿ ಬೈಕ್ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಸವಾರರು ಸಾವಿನಿಂದ ಪಾರಾಗಿದ್ದಾರೆ. ಬೈಕ್ ಸವಾರ ಒಳ ರಸ್ತೆಯಿಂದ ಮುಖ್ಯ ರಸ್ತೆಗೆ ಬರುತ್ತಿದ್ದಾಗ ವೇಗವಾಗಿ ಬಂದ ಕಾರಿನ ಚಾಲಕ ಬೈಕ್​​ಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಮುಂದಾಗಿದ್ದಾರೆ. ಆದರೂ ಪ್ರಯೋಜನವಾಗದೆ, ನಿಯಂತ್ರಣ ಕಳೆದುಕೊಂಡು ಕಾರು ಬೈಕ್​ಗೆ ಡಿಕ್ಕಿಯಾಗಿದೆ. ಮತ್ತೊಂದು ಭಾಗದಲ್ಲಿ ನಿಲ್ಲಿಸಿದ್ದ ಮತ್ತೊಂದು ಬೈಕ್​​ಗೂ ಡಿಕ್ಕಿಯಾಗಿ ಕಾರು ಪಲ್ಟಿಯಾಗಿದೆ. ಬಳಿಕ ಮಣ್ಣಿನ‌ ದಿಬ್ಬದ ಮೇಲೆ ಮಗುಚಿ ಬಿದ್ದಿದೆ. ಘಟನೆಯಲ್ಲಿ ಕಾರು ಚಾಲಕ ಸನತ್ ಪವಾಡ ಸದೃಶವಾಗಿ ಪಾರಾಗಿದ್ದು, ಬೈಕ್ ಸವಾರ ಯತೀಶ ಪುತ್ತೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:22 am, Wed, 13 November 24

ಪೃಥ್ವಿರಾಜ್​ ಬಿ.ಯು. ಮಂಗಳೂರು

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
Loading...
Unable to load recommendations.
Follow Us