ದೆಹಲಿಯಲ್ಲಿ ನಡೆದ ಕಾರು ಸ್ಫೋಟ ಆತ್ಮಾಹುತಿ ದಾಳಿ?: ತನಿಖಾ ಸಂಸ್ಥೆಗಳ ಶಂಕೆ

Updated on: Nov 11, 2025 | 10:11 AM

ದೆಹಲಿಯ ಕೆಂಪುಕೋಟೆ ಬಳಿ ಸಂಭವಿಸಿದ ಭೀಕರ ಕಾರ್ ಸ್ಫೋಟ ದೇಶಾದ್ಯಂತ ಆತಂಕ ಸೃಷ್ಟಿಸಿದೆ. ತನಿಖಾ ಸಂಸ್ಥೆಗಳು ಇದನ್ನು ಭಯೋತ್ಪಾದಕ ಅಥವಾ ಆತ್ಮಹತ್ಯಾ ದಾಳಿ ಎಂದು ಶಂಕಿಸಿವೆ. ಘಟನೆಯಲ್ಲಿ ಹಲವರು ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಘಟನೆ ಸಂಬಂಧ ಕಾರು ಮಾಲೀಕ ತಾರೀಖ್‌ನನ್ನು ವಶಕ್ಕೆ ಪಡೆಯಲಾಗಿದ್ದು, ಡಿಎನ್‌ಎ ಪರೀಕ್ಷೆ ಸೇರಿದಂತೆ ತನಿಖೆ ತೀವ್ರಗೊಂಡಿದೆ.

ದೆಹಲಿ, ನವೆಂಬರ್​ 11: ಕೆಂಪುಕೋಟೆ ಸಮೀಪದಲ್ಲಿ ಸಂಭವಿಸಿದ ಭೀಕರ ಕಾರು ಸ್ಫೋಟದಿಂದ ಜನ ಬೆಚ್ಚಿಬಿದ್ದಿದ್ದಾರೆ. ಮೆಟ್ರೋ ನಿಲ್ದಾಣದ ಗೇಟ್ ಸಂಖ್ಯೆ ಒಂದರ ಬಳಿ ಈ ಘಟನೆ ನಡೆದಿದ್ದು, ಸ್ಥಳದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಈ ಘಟನೆಯು ಭಯೋತ್ಪಾದಕ ಕೃತ್ಯವಾಗಿರುವ ಬಗ್ಗೆ ತನಿಖಾ ಸಂಸ್ಥೆಗಳು ಶಂಕೆ ವ್ಯಕ್ತಪಡಿಸಿವೆ. ಕಾರಿನಲ್ಲಿ ಸ್ಫೋಟಕಗಳನ್ನು ಇರಿಸಿ ಸ್ಫೋಟಿಸಿರಬಹುದು ಅಥವಾ ಇದು ಆತ್ಮಾಹುತಿ ದಾಳಿಯಾಗಿರಬಹುದು ಎಂದು ಪ್ರಾಥಮಿಕವಾಗಿ ಅನುಮಾನಿಸಲಾಗಿದೆ. ಸ್ಫೋಟಗೊಂಡ ಐ20 ಕಾರಿನೊಳಗೆ ಒಬ್ಬ ವ್ಯಕ್ತಿ ಇದ್ದ ಎನ್ನಲಾಗಿದ್ದು, ಆತನ ಗುರುತು ಇನ್ನೂ ಪತ್ತೆಯಾಗಿಲ್ಲ. ಮೃತದೇಹದ ಡಿಎನ್‌ಎ ಪರೀಕ್ಷೆ ನಡೆಸಲಾಗುತ್ತಿದೆ. ಪುಲ್ವಾಮಾದ ತಾರೀಖ್ ಎಂಬಾತ ಈ ಕಾರಿನ ಮಾಲೀಕ ಎಂದು ತಿಳಿದುಬಂದಿದ್ದು, ಆತನನ್ನು ವಶಕ್ಕೆ ಪಡೆಯಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​ ಮಾಡಿ.

Published on: Nov 11, 2025 10:10 AM