ಏಕಾಏಕಿ ಹೊತ್ತಿ ಉರಿದ ಕಾರು: ಕನ್ಯೆ ನೋಡಲು ಹೋಗಿದ್ದವ ಪ್ರಾಣಾಪಾಯದಿಂದ ಪಾರು

Edited By:

Updated on: Aug 26, 2026 | 6:24 PM

ಸಿಂದಗಿ ಪಟ್ಟಣದ ಹಳೆ ಬಜಾರ್‌ನಲ್ಲಿ ಕಿಯಾ ಕಾರೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣವಾಗಿ ಭಸ್ಮವಾಗಿರುವ ಘಟನೆ ನಡೆದಿದೆ. ಕಾರಿನಲ್ಲಿ ಸಂಭವಿಸಿದ ಶಾರ್ಟ್ ಸರ್ಕ್ಯೂಟ್‌ ಬೆಂಕಿಗೆ ಕಾರಣ ಎನ್ನಲಾಗಿದ್ದು, ವಾಹನದಲ್ಲಿದ್ದ ಇಬ್ಬರು ಪ್ರಯಾಣಿಕರು ಸಮಯಪ್ರಜ್ಞೆ ಮೆರೆದು ತಕ್ಷಣವೇ ಹೊರಗೆ ಜಿಗಿದಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ದೇವರಹಿಪ್ಪರಗಿ ತಾಲೂಕಿನ ಮಾರ್ಕಪ್ಪನಹಳ್ಳಿ ಗ್ರಾಮದ ಅನಂದ ಮದುವೆಯಾಗಲೆಂದು ಕನ್ಯೆ ನೋಡಲು ಸಿಂದಗಿ ಬಂದಿದ್ದರು. ಈ ವೇಳೆ ಈ ದುರ್ಘಟನೆ ನಡೆದಿದೆ.

ವಿಜಯಪುರ, (ಆಗಸ್ಟ್ 26): ಜಿಲ್ಲೆಯ ಸಿಂದಗಿ ಪಟ್ಟಣದ ಹಳೆ ಬಜಾರ್‌ನಲ್ಲಿ ಕಿಯಾ ಕಾರೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣವಾಗಿ ಭಸ್ಮವಾಗಿರುವ ಘಟನೆ ನಡೆದಿದೆ. ಕಾರಿನಲ್ಲಿ ಸಂಭವಿಸಿದ ಶಾರ್ಟ್ ಸರ್ಕ್ಯೂಟ್‌ ಬೆಂಕಿಗೆ ಕಾರಣ ಎನ್ನಲಾಗಿದ್ದು, ವಾಹನದಲ್ಲಿದ್ದ ಇಬ್ಬರು ಪ್ರಯಾಣಿಕರು ಸಮಯಪ್ರಜ್ಞೆ ಮೆರೆದು ತಕ್ಷಣವೇ ಹೊರಗೆ ಜಿಗಿದಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ದೇವರಹಿಪ್ಪರಗಿ ತಾಲೂಕಿನ ಮಾರ್ಕಪ್ಪನಹಳ್ಳಿ ಗ್ರಾಮದ ಅನಂದ ಮದುವೆಯಾಗಲೆಂದು ಕನ್ಯೆ ನೋಡಲು ಸಿಂದಗಿ ಬಂದಿದ್ದರು. ಈ ವೇಳೆ ಈ ದುರ್ಘಟನೆ ನಡೆದಿದೆ. ಇನ್ನು ಘಟನೆಯಲ್ಲಿ ಕಾರು ಸಂಪೂರ್ಣವಾಗಿ ಉರಿದು ಬೂದಿಯಾಗಿದೆ. ಕಾರಿನ ಮಾಲೀಕರ ಹೆಸರು ಹಾಗೂ ಹೆಚ್ಚಿನ ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿದೆ. ಸುದ್ದಿ ತಿಳಿಯುತ್ತಿದ್ದಂತೆ ಸಿಂದಗಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Aug 26, 2026 06:22 PM
Loading...
Unable to load recommendations.
Follow Us