AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸಕೋಟೆ-ಕೋಲಾರ ಹೆದ್ದಾರಿಯಲ್ಲಿ ಟ್ರಕ್​​​ಗೆ ಗುದ್ದಿ ಹೊತ್ತಿ ಉರಿದ ಕಾರು: ಚಾಲಕ ಬದುಕಿದ್ದೇ ಪವಾಡ!

ಹೊಸಕೋಟೆ-ಕೋಲಾರ ಹೆದ್ದಾರಿಯಲ್ಲಿ ಟ್ರಕ್​​​ಗೆ ಗುದ್ದಿ ಹೊತ್ತಿ ಉರಿದ ಕಾರು: ಚಾಲಕ ಬದುಕಿದ್ದೇ ಪವಾಡ!

ನವೀನ್ ಕುಮಾರ್ ಟಿ
| Edited By: |

Updated on:Mar 29, 2026 | 8:18 AM

Share

ಹೊಸಕೋಟೆ-ಕೋಲಾರ ಹೆದ್ದಾರಿಯಲ್ಲಿ ಭೀಕರ ಅಪಘಾತ ನಡೆದಿದೆ. ಟ್ರಕ್​​ಗೆ ಗುದ್ದಿದ ಪರಿಣಾಮ ಹೊತ್ತಿಕೊಂಡ ಬೆಂಕಿಗೆ ಕಾರು ಸಂಪೂರ್ಣ ಸುಟ್ಟು ಕರಕಲಾಗಿದ್ದು, ಟ್ರಕ್​​ಗೂ ಭಾಗಶಃ ಹಾನಿಯಾಗಿದೆ. ಕಾರು ಚಾಲಕನನ್ನು ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ಸೇರಿಸಿದ್ದು, ಟ್ರಕ್​​ ಡ್ರೈವರ್​​ ಘಟನೆ ಬಳಿಕ ಎಸ್ಕೇಪ್​​ ಆಗಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ದೇವನಹಳ್ಳಿ, ಮಾರ್ಚ್​​ 29: ಯೂಟರ್ನ್ ಪಡೆಯುತ್ತಿದ್ದ ಟ್ರಕ್​​ಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡ ಘಟನೆ ಹೊಸಕೋಟೆ-ಕೋಲಾರ ಹೆದ್ದಾರಿಯ ಹಲಸಹಳ್ಳಿ ಗೇಟ್ ಬಳಿ ನಡೆದಿದೆ. ಡಿಕ್ಕಿಯ ರಬಸಕ್ಕೆ ಕಾರಿನ ಮುಂಭಾಗ ನಜ್ಜುಗುಜ್ಜಾಗಿ ಬೆಂಕಿ ಕಾಣಿಸಿಕೊಂಡಿದೆ. ಪರಿಣಾಮ ಸಂಪೂರ್ಣ ಕಾರು ಹಾಗೂ ಟ್ರಕ್​​ನ ಸ್ವಲ್ಪ ಭಾಗ ಸುಟ್ಟು ಕರಕಲಾಗಿದೆ. ಅಪಘಾತದ ಬಳಿಕ ಕಾರಿನಲ್ಲಿ ಸಿಲುಕಿದ್ದ ಚಾಲಕನನ್ನು ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಬೆಂಕಿ ನಂದಿಸಿದ್ದು, ಅಪಘಾತವಾಗ್ತಿದ್ದಂತೆ ಟ್ರಕ್ ಚಾಲಕ ಸ್ಥಳದಿಂದ ಎಸ್ಕೇಪ್ ಆಗಿದ್ದಾನೆ. ಸ್ಥಳಕ್ಕೆ ಹೊಸಕೋಟೆ ಸಂಚಾರ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Mar 29, 2026 07:26 AM
Follow Us
Naveen Kumar
Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More