ಮೆಜೆಸ್ಟಿಕ್ ರೈಲ್ವೆ ಪಾರ್ಕಿಂಗ್ ಲಾಟ್ನಲ್ಲಿ ಕಾರಿಗೆ ಬೆಂಕಿ
ಬೆಂಗಳೂರಿನ ಮೆಜೆಸ್ಟಿಕ್ ರೈಲ್ವೆ ನಿಲ್ದಾಣದ ಪಾರ್ಕಿಂಗ್ ಲಾಟ್ನಲ್ಲಿ ನಿಲ್ಲಿಸಿದ್ದ ಕಾರಿಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದೆ. ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದ ಈ ಅಗ್ನಿ ಅವಘಡದಲ್ಲಿ ಕಾರು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ. ಉಪ್ಪಾರಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು, ಫೆ.19: ಬೆಂಗಳೂರಿನ ಮೆಜೆಸ್ಟಿಕ್ ರೈಲ್ವೆ ನಿಲ್ದಾಣದ ಪಾರ್ಕಿಂಗ್ ಲಾಟ್ನಲ್ಲಿ ನಿಲ್ಲಿಸಿದ್ದ ಕಾರಿಗೆ ಬೆಂಕಿ ಹೊತ್ತಿಕೊಂಡ ಘಟನೆಯೊಂದು. ಹಲವು ದಿನಗಳಿಂದ ಪಾರ್ಕಿಂಗ್ ಲಾಟ್ನಲ್ಲಿ ನಿಂತಿದ್ದ ಈ ಕಾರಿಗೆ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ತಿಳಿದುಬಂದಿದೆ. ಅಗ್ನಿ ಕೆನ್ನಾಲಿಗೆಗೆ ಕಾರು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಘಟನೆ ನಡೆದ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದಾವಿಸಿದ್ದಾರೆ. ಬೆಂಕಿ ಪಕ್ಕದಲ್ಲಿದ್ದ ಇತರ ಕಾರುಗಳಿಗೂ ಹರಡುವ ಸಾಧ್ಯತೆಯಿದ್ದುದರಿಂದ, ಸಿಬ್ಬಂದಿ ತಕ್ಷಣ ಕಾರ್ಯಪ್ರವೃತ್ತರಾಗಿ ಬೆಂಕಿಯನ್ನು ಯಶಸ್ವಿಯಾಗಿ ನಂದಿಸಿದ್ದಾರೆ. ಆದರೂ, ಅಗ್ನಿ ಅವಘಡದಿಂದ ಕಾರು ಸಂಪೂರ್ಣವಾಗಿ ಸುಟ್ಟು ಹೋಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ರೈಲ್ವೆ ನಿಲ್ದಾಣದ ಪಾರ್ಕಿಂಗ್ನಲ್ಲಿ ಇಂತಹ ಅಗ್ನಿ ಅವಘಡ ಸಂಭವಿಸಿರುವುದು ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್ ಏನು?
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ
ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ

