ಮೆಜೆಸ್ಟಿಕ್ ರೈಲ್ವೆ ಪಾರ್ಕಿಂಗ್ ಲಾಟ್‌ನಲ್ಲಿ ಕಾರಿಗೆ ಬೆಂಕಿ

Updated on: Feb 19, 2026 | 8:33 AM

ಬೆಂಗಳೂರಿನ ಮೆಜೆಸ್ಟಿಕ್ ರೈಲ್ವೆ ನಿಲ್ದಾಣದ ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ ಕಾರಿಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಸಂಭವಿಸಿದ ಈ ಅಗ್ನಿ ಅವಘಡದಲ್ಲಿ ಕಾರು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ. ಉಪ್ಪಾರಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರು, ಫೆ.19: ಬೆಂಗಳೂರಿನ ಮೆಜೆಸ್ಟಿಕ್ ರೈಲ್ವೆ ನಿಲ್ದಾಣದ ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ ಕಾರಿಗೆ  ಬೆಂಕಿ ಹೊತ್ತಿಕೊಂಡ ಘಟನೆಯೊಂದು. ಹಲವು ದಿನಗಳಿಂದ ಪಾರ್ಕಿಂಗ್ ಲಾಟ್‌ನಲ್ಲಿ ನಿಂತಿದ್ದ ಈ ಕಾರಿಗೆ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ತಿಳಿದುಬಂದಿದೆ. ಅಗ್ನಿ ಕೆನ್ನಾಲಿಗೆಗೆ ಕಾರು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಘಟನೆ ನಡೆದ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದಾವಿಸಿದ್ದಾರೆ. ಬೆಂಕಿ ಪಕ್ಕದಲ್ಲಿದ್ದ ಇತರ ಕಾರುಗಳಿಗೂ ಹರಡುವ ಸಾಧ್ಯತೆಯಿದ್ದುದರಿಂದ, ಸಿಬ್ಬಂದಿ ತಕ್ಷಣ ಕಾರ್ಯಪ್ರವೃತ್ತರಾಗಿ ಬೆಂಕಿಯನ್ನು ಯಶಸ್ವಿಯಾಗಿ ನಂದಿಸಿದ್ದಾರೆ. ಆದರೂ, ಅಗ್ನಿ ಅವಘಡದಿಂದ ಕಾರು ಸಂಪೂರ್ಣವಾಗಿ ಸುಟ್ಟು ಹೋಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ರೈಲ್ವೆ ನಿಲ್ದಾಣದ ಪಾರ್ಕಿಂಗ್‌ನಲ್ಲಿ ಇಂತಹ ಅಗ್ನಿ ಅವಘಡ ಸಂಭವಿಸಿರುವುದು ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More