ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿ ಬಿದ್ದ ಕಾರು

Updated on: Dec 18, 2025 | 3:18 PM

ಬೈಕ್ ಸವಾರನನ್ನ ಬಚಾವು ಮಾಡಲು ಹೋಗಿ ಕಾರು ಹತ್ತು ಅಡಿ ಮೇಲೇ ಹಾರಿ ಬುಗುರಿ ತಿರುಗಿದಂತೆ ತಿರುಗಿ ಮತ್ತೆ ರಸ್ತೆ ಮೇಲೆ ಬಿದ್ದಿದೆ. ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಕೌಡಿಯಾಳ ಬಳಿ ಈ ಘಟನೆ ನಡೆದಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಬರುತ್ತಿದ್ದ ಕಾರಿಗೆ ಬೈಕ್ ಅಡ್ಡ ಬಂದಿದೆ. ಇದರಿಂದ ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್​​ಗೆ ಡಿಕ್ಕಿ ಹೊಡೆದಿದೆ. ಬಳಿಕ ಕಾರು ಹತ್ತು ಅಡಿ ಮೇಲಕ್ಕೆ ಹಾರಿ ಬಿದ್ದಿದ್ದು, ಈ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಬೀದರ್, (ಡಿಸೆಂಬರ್ 18): ಬೈಕ್ ಸವಾರನನ್ನ ಬಚಾವು ಮಾಡಲು ಹೋಗಿ ಕಾರು ಹತ್ತು ಅಡಿ ಮೇಲೇ ಹಾರಿ ಬುಗುರಿ ತಿರುಗಿದಂತೆ ತಿರುಗಿ ಮತ್ತೆ ರಸ್ತೆ ಮೇಲೆ ಬಿದ್ದಿದೆ. ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಕೌಡಿಯಾಳ ಬಳಿ ಈ ಘಟನೆ ನಡೆದಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಬರುತ್ತಿದ್ದ ಕಾರಿಗೆ ಬೈಕ್ ಅಡ್ಡ ಬಂದಿದೆ. ಇದರಿಂದ ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್​​ಗೆ ಡಿಕ್ಕಿ ಹೊಡೆದಿದೆ. ಬಳಿಕ ಕಾರು ಹತ್ತು ಅಡಿ ಮೇಲಕ್ಕೆ ಹಾರಿ ಬಿದ್ದಿದ್ದು, ಈ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More