ನೆಲಮಂಗಲ ಹೆದ್ದಾರಿಯಲ್ಲಿ ಗುಂಡಿ ತಪ್ಪಿಸಲು ಹೋಗಿ ಕಾರು ಪಲ್ಟಿ: ಆರು ಮಂದಿಗೆ ಸಣ್ಣಪುಟ್ಟ ಗಾಯ
ಬೆಂಗಳೂರಿನ ನೆಲಮಂಗಲದ ರಾಷ್ಟ್ರೀಯ ಹೆದ್ದಾರಿಯಲ್ಲಿ ದೊಡ್ಡ ಗುಂಡಿ ತಪ್ಪಿಸಲು ಹೋಗಿ ಕಾರು ಪಲ್ಟಿಯಾಗಿದೆ. ಕುಣಿಗಲ್ ಬೈಪಾಸ್ ಫ್ಲೈ ಓವರ್ ಬಳಿ ನಡೆದ ಈ ಘಟನೆಯಲ್ಲಿ ಕಾರಿನಲ್ಲಿದ್ದ ಆರು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಈ ಅಪಘಾತ ರಸ್ತೆ ಗುಂಡಿಗಳ ಶಾಶ್ವತ ಪರಿಹಾರದ ಬಗ್ಗೆ ಪ್ರಶ್ನೆ ಮೂಡಿಸಿದೆ.
ಬೆಂಗಳೂರು, ಅ.21: ಬೆಂಗಳೂರಿನಲ್ಲಿ ರಸ್ತೆ ಗುಂಡಿಗಳ ಬಗ್ಗೆ ವಿದೇಶಿಗರು, ಬೆಂಗಳೂರಿನ ದೈತ್ಯ ಕಂಪನಿಗಳು ಒಂದಲ್ಲ ಒಂದು ಪೋಸ್ಟ್ ಮಾಡಿ ಸರ್ಕಾರವನ್ನು ಪ್ರಶ್ನೆ ಮಾಡುತ್ತ ಇದೆ. ಇದರ ನಡುವೆ ರಸ್ತೆ ಗುಂಡಿಗಳಿಂದ ಹಲವು ಅಪಘಾತಗಳು ಕೂಡ ವರದಿಯಾಗಿದೆ. ಇದೀಗ ಮತ್ತೊಂದು ಅಪಘಾತವಾಗಿದೆ. ನೆಲಮಂಗಲದ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಂಡಿಯೊಂದನ್ನು ತಪ್ಪಿಸಲು ಹೋಗಿ ಕಾರು ಪಲ್ಟಿಯಾಗಿದೆ. ಕುಣಿಗಲ್ ಬೈಪಾಸ್ ಫ್ಲೈ ಓವರ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ರಸ್ತೆಯ ಮಧ್ಯೆ ಇದ್ದ ದೊಡ್ಡ ಗುಂಡಿಯನ್ನು ತಪ್ಪಿಸಲು ಚಾಲಕ ಪ್ರಯತ್ನಿಸಿದ್ದನೆ, ಈ ವೇಳೆ ಕಾರು ಪಲ್ಟಿಯಾಗಿದೆ. ಅದೃಷ್ಟವಶಾತ್, ಕಾರಿನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಆರು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಕಾರಿನ ಮುಂಭಾಗ ಸಂಪೂರ್ಣವಾಗಿ ಡ್ಯಾಮೇಜ್ ಆಗಿದೆ. ರಾಷ್ಟ್ರೀಯ ಹೆದ್ದಾರಿಯಂತಹ ಪ್ರಮುಖ ರಸ್ತೆಯಲ್ಲಿ ಇಂತಹ ಗುಂಡಿಗಳು ಕಾಣಿಸಿಕೊಳ್ಳುವುದು ರಸ್ತೆ ನಿರ್ವಹಣೆಯ ವೈಫಲ್ಯವನ್ನು ಎತ್ತಿ ತೋರಿಸುತ್ತದೆ. ಈ ಘಟನೆ ರಸ್ತೆ ಗುಂಡಿಗಳಿಗೆ ಶಾಶ್ವತ ಪರಿಹಾರದ ಅಗತ್ಯವಿದೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಸೋಷಿಯಲ್ ಮೀಡಿಯಾದಲ್ಲಿ ಅತಿ ಹೆಚ್ಚು ವೀಕ್ಷಣೆ ಪಡೆದಿದ್ದ ವಿಡಿಯೋ ವೈರಲ್
ಕ್ರಾಂತಿ ಕಿಚ್ಚಿನ ಮಧ್ಯೆ ಖರ್ಗೆ ಭೇಟಿಯಾಗಿದ್ಯಾಕೆ? ಗುಟ್ಟುಬಿಚ್ಚಿಟ್ಟ ಡಿಕೆ
ಹರಿಹರದ ಮನೆಯಲ್ಲಿ ಟೈಲ್ಸ್ ಕೆಳಗೆ ನಿಗೂಢ ಶಾಖ! ಬೆಚ್ಚಿಬಿದ್ದ ಮನೆ ಮಂದಿ
IND vs PAK: ಪಾಕಿಸ್ತಾನ್ ವಿರುದ್ಧ ಹೀನಾಯವಾಗಿ ಸೋತ ಭಾರತ

