Viral Video: ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ನದಿಯ ನಡುವೆ ನೀರಿನಲ್ಲಿ ಚಲಿಸುತ್ತಿರುವಾಗಲೇ ಕಾರು ತೇಲಲಾರಂಭಿಸಿತು. ಈ ವೇಳೆ ಕಾರಿನಲ್ಲಿ ಪ್ರಯಾಣಿಕರಿದ್ದರು. ಇದನ್ನು ನೋಡಿದ ಗ್ರಾಮಸ್ಥರು ತಮ್ಮ ಪ್ರಾಣದ ಹಂಗು ತೊರೆದು ಆ ಕಾರಿನಲ್ಲಿದ್ದವರನ್ನು ಸುರಕ್ಷಿತವಾಗಿ ದಡಕ್ಕೆ ತಂದಿದ್ದಾರೆ. ಈ ಘಟನೆಯ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ.
ಉತ್ತರ ಪ್ರದೇಶದ ಮೊರಾದಾಬಾದ್ ಜಿಲ್ಲೆಯ ಭೋಜ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ವೈರಲ್ ಆಗಿರುವ ವೀಡಿಯೊದಲ್ಲಿ, ಚಲಿಸುತ್ತಿದ್ದ ಕಾರು ಬಲವಾದ ನೀರಿನ ರಭಸಕ್ಕೆ ಸಿಲುಕಿ ತೇಲತೊಡಗಿದೆ. ಆ ಕಾರಿನಲ್ಲಿ ಸಾಕಷ್ಟು ಜನರಿದ್ದರು. ಕಾರು ತೇಲುತ್ತಿರುವುದನ್ನು ಕಂಡು ಸ್ಥಳದಲ್ಲಿದ್ದ ಗ್ರಾಮಸ್ಥರು ಕಾರಿನಲ್ಲಿದ್ದವರನ್ನು ಸುರಕ್ಷಿತವಾಗಿ ಹೊರತೆಗೆದಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ