Viral Video: ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ

Updated on: Sep 18, 2024 | 8:03 PM

ನದಿಯ ನಡುವೆ ನೀರಿನಲ್ಲಿ ಚಲಿಸುತ್ತಿರುವಾಗಲೇ ಕಾರು ತೇಲಲಾರಂಭಿಸಿತು. ಈ ವೇಳೆ ಕಾರಿನಲ್ಲಿ ಪ್ರಯಾಣಿಕರಿದ್ದರು. ಇದನ್ನು ನೋಡಿದ ಗ್ರಾಮಸ್ಥರು ತಮ್ಮ ಪ್ರಾಣದ ಹಂಗು ತೊರೆದು ಆ ಕಾರಿನಲ್ಲಿದ್ದವರನ್ನು ಸುರಕ್ಷಿತವಾಗಿ ದಡಕ್ಕೆ ತಂದಿದ್ದಾರೆ. ಈ ಘಟನೆಯ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ.

ಉತ್ತರ ಪ್ರದೇಶದ ಮೊರಾದಾಬಾದ್ ಜಿಲ್ಲೆಯ ಭೋಜ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ವೈರಲ್ ಆಗಿರುವ ವೀಡಿಯೊದಲ್ಲಿ, ಚಲಿಸುತ್ತಿದ್ದ ಕಾರು ಬಲವಾದ ನೀರಿನ ರಭಸಕ್ಕೆ ಸಿಲುಕಿ ತೇಲತೊಡಗಿದೆ. ಆ ಕಾರಿನಲ್ಲಿ ಸಾಕಷ್ಟು ಜನರಿದ್ದರು. ಕಾರು ತೇಲುತ್ತಿರುವುದನ್ನು ಕಂಡು ಸ್ಥಳದಲ್ಲಿದ್ದ ಗ್ರಾಮಸ್ಥರು ಕಾರಿನಲ್ಲಿದ್ದವರನ್ನು ಸುರಕ್ಷಿತವಾಗಿ ಹೊರತೆಗೆದಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More