ಬಿಎಂಟಿಸಿ ಬಸ್​ಗೆ ಹಿಂದಿನಿಂದ ಗುದ್ದಿ ಅಡಿಯಲ್ಲಿ ಸಿಕ್ಹಾಕಿಕೊಂಡ ಕಾರು, ಅದೃಷ್ಟವಶಾತ್ ಪ್ರಾಣಾಪಾಯವಿಲ್ಲ!

ಅರುಣ್​ ಕುಮಾರ್​ ಬೆಳ್ಳಿ

Updated on: Jan 02, 2025 | 4:43 PM

ನಗರದಲ್ಲಿ ನಡೆಯುವ ರಸ್ತೆ ಅಪಘಾತಗಳೇ ಹಾಗೆ, ಕೆಲವು ಸಲ ನಮ್ಮ ಊಹೆಗೂ ನಿಲುಕದ ರೀತಿಯಲ್ಲಿ ಅವು ಸಂಭವಿಸಿಬಿಡುತ್ತವೆ. ಕಾರಿನ ನೋಂದಣಿ ಸಂಖ್ಯೆಯಿಂದ ಅದು ಕಲಬುರಗಿಯದೆಂದು ಗೊತ್ತಾಗುತ್ತದೆ. ಸಮಾಧಾನಕರ ಸಂಗತಿಯೆಂದರೆ ಯಾರಿಗೂ ಗಾಯಗಳಾಗಿಲ್ಲ. ಆದರೆ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ. ಈ ಅಪಘಾತದಲ್ಲಿ ಯಾರು ಸರಿ ಯಾರು ತಪ್ಪು ಅಂತ ಹೇಳಲಾಗದು.

ಬೆಂಗಳೂರು: ಇಲ್ಲಿ ನಡೆದಿರೋದು ಬಹಳ ದೊಡ್ಡ ಅಪಘಾತವೇನೂ ಅಲ್ಲ, ಅದರೆ ಕಾರಿನ ವೇಗ ಮತ್ತಷ್ಟು ಜಾಸ್ತಿ ಇದ್ದಿದ್ದರೆ ಅದರ ಚಾಲಕ ಮತ್ತು ಮುಂಭಾಗದ ಸೀಟಿನಲ್ಲಿ ಕೂತಿದ್ದವರಿಗೆ ತೀವ್ರ ಸ್ವರೂಪದ ಗಾಯಗಳಾಗುತ್ತಿದ್ದವು ಮತ್ತು ಪ್ರಾಣಕ್ಕೂ ಸಂಚಕಾರ ಉಂಟಾಗುವ ಅಪಾಯವಿತ್ತು. ಬಿಎಂಟಿಸಿ ಬಸ್ಸಿನ ಚಾಲಕ ಇದಕ್ಕಿದ್ದಂತೆ ಬ್ರೇಕ್ ಹಾಕಿದ್ದರಿಂದ ಹಿಂದೆ ಬರುತ್ತಿದ್ದ ಕಾರು ಬಸ್ಸಿನ ಹಿಂಭಾಗಕ್ಕೆ ಗುದ್ದಿದೆ. ಬನ್ನೇರುಘಟ್ಟ-ಜಿಗಣಿ ಮುಖ್ಯರಸ್ತೆಯಲ್ಲಿ ಬರುವ ಹರಪನಹಳ್ಳಿ ಎಂಬಲ್ಲಿ ಘಟನೆ ನಡೆದಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಹೆಬ್ಬಾಳ ಫ್ಲೈಓವರ್​ ಮೇಲೆ ಸರಣಿ ಅಪಘಾತ; ಬಿಎಂಟಿಸಿ ಬಸ್​ ಚಾಲಕನ ಯಡವಟ್ಟಿನಿಂದ ಘೋರ ದುರಂತ, ವಿಡಿಯೋ ನೋಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.