AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಲತಿ ನದಿ ಪ್ರವಾಹದಲ್ಲಿ ಸಿಲುಕಿದ ಕಾರು: ಮಕ್ಕಳು ಸೇರಿ ಒಂದೇ ಕುಟುಂಬದ 6 ಜನರ ರಕ್ಷಣೆ!

ಮಾಲತಿ ನದಿ ಪ್ರವಾಹದಲ್ಲಿ ಸಿಲುಕಿದ ಕಾರು: ಮಕ್ಕಳು ಸೇರಿ ಒಂದೇ ಕುಟುಂಬದ 6 ಜನರ ರಕ್ಷಣೆ!

ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on:Aug 01, 2026 | 5:27 PM

Share

Chikmagalur Flooding: ಚಿಕ್ಕಮಗಳೂರಿನ ಹೆಬ್ಬೂರು ಬಳಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹೊಳೆಯು ಉಕ್ಕಿ ಹರಿದು ಕಾರೊಂದು ಮುಳುಗಡೆ ಆಗಿದೆ. ಹೊನ್ನಾವರ ಮೂಲದ ಕುಟುಂಬವೊಂದು ಕಾರಿನೊಳಗೆ ಸಿಲುಕಿ ಒದ್ದಾಡಿದೆ. ತಕ್ಷಣವೇ ಸ್ಥಳೀಯರು ಕಾರಿನಲ್ಲಿದ್ದವರನ್ನು ರಕ್ಷಿಣೆ ಮಾಡಿದ್ದಾರೆ. ಮಲೆನಾಡು ಭಾಗದಲ್ಲಿ ಪ್ರವಾಹದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಚಿಕ್ಕಮಗಳೂರು, ಆಗಸ್ಟ್​ 01: ಜಿಲ್ಲೆಯ ಹೆಬ್ಬೂರು ಸಮೀಪದ ಹೊಳೆಯಲ್ಲಿ ಭಾರೀ ಮಳೆಯಿಂದಾಗಿ ನೀರು ಉಕ್ಕಿ ಹರಿದು ಕಾರೊಂದು ಮುಳುಗಡೆಯಾಗಿದೆ. ಕಾರಿನಲ್ಲಿ ಸಿಲುಕಿದ್ದ ಹೊನ್ನಾವರ ಮೂಲದ ಕುಟುಂಬವನ್ನು ಸ್ಥಳೀಯರು ರಕ್ಷಣೆ ಮಾಡಿರುವ ಘಟನೆ ನಡೆದಿದೆ. ನಾಬ್ಳ-ಬೆಳ್ಳೂರು-ಶೃಂಗೇರಿ ಸಂಪರ್ಕಿಸುವ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ತುಂಬಿ ಹರಿಯುತ್ತಿದ್ದ ಸೇತುವೆಯನ್ನು ದಾಟಲು ಪ್ರಯತ್ನಿಸಿದಾಗ ಕಾರು ನೀರಿನಲ್ಲಿ ಸಿಲುಕಿಕೊಂಡಿದೆ. ಮಲೆನಾಡು ಭಾಗದಲ್ಲಿ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯೇ ಈ ಪರಿಸ್ಥಿತಿಗೆ ಕಾರಣವಾಗಿದೆ. ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಮತ್ತು ಉತ್ತರ ಕನ್ನಡ ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ನೀರಿನ ಮಟ್ಟ ಹೆಚ್ಚಾಗಿ ರಸ್ತೆಗಳು ಜಲಾವೃತಗೊಂಡಿವೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Aug 01, 2026 05:21 PM

Follow Us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.

Read More