ಹೊಸದಾಗಿ ಹಾಸ್ಟೆಲ್ಗೆ ಬಂದ ವಿದ್ಯಾರ್ಥಿಗೆ ರ್ಯಾಗಿಂಗ್, ದೂರು ನೀಡಿದ್ದಕ್ಕೆ ಬೆತ್ತಲೆಗೊಳಿಸಿ ವಿಕೃತಿ
ಬೆಂಗಳೂರಿನಲ್ಲೊಂದು ಅಮಾನವೀಯ ಕೃತ್ಯ ನಡೆದಿದೆ. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಹತ್ತನೇ ತರಗತಿ ವಿದ್ಯಾರ್ಥಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಶಾಲಾ ಹಾಸ್ಟೆಲ್ ನಲ್ಲಿ ನಡೆದಿದೆ.10 ಕ್ಲಾಸ್ ವಿದ್ಯಾರ್ಥಿಯೋರ್ವ ಹೊಸದಾಗಿ ಹಾಸ್ಟೆಲ್ ಗೆ ಸೇರಿಕೊಂಡಿದ್ದ. ಆದ್ರೆ, ಸಿನೀಯರ್ ಗಳು ರ್ಯಾಗಿಂಗ್ ಮಾಡಿದ್ದಾರೆ.
ಬೆಂಗಳೂರು, (ಸೆಪ್ಟೆಂಬರ್ 10): ಬೆಂಗಳೂರಿನಲ್ಲೊಂದು ಅಮಾನವೀಯ ಕೃತ್ಯ ನಡೆದಿದೆ. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಹತ್ತನೇ ತರಗತಿ ವಿದ್ಯಾರ್ಥಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಶಾಲಾ ಹಾಸ್ಟೆಲ್ ನಲ್ಲಿ ನಡೆದಿದೆ.10 ಕ್ಲಾಸ್ ವಿದ್ಯಾರ್ಥಿಯೋರ್ವ ಹೊಸದಾಗಿ ಹಾಸ್ಟೆಲ್ ಗೆ ಸೇರಿಕೊಂಡಿದ್ದ. ಆದ್ರೆ, ಸಿನೀಯರ್ ಗಳು ರ್ಯಾಗಿಂಗ್ ಮಾಡಿದ್ದಾರೆ. ಇದರಿಂದ ನೊಂದ ವಿದ್ಯಾರ್ಥಿ, ವಾರ್ಡನ್ ಹಾಗೂ ಪ್ರಿನ್ಸಿಪಾಲ್ ಗೆ ದೂರು ನೀಡಿದ್ದಾನೆ. ಇದರಿಂದ ಮತ್ತಷ್ಟು ಕೋಪಗೊಂಡ ಸಿನೀಯರ್ ವಿದ್ಯಾರ್ಥಿಗಳು, ಹೊಸ ವಿದ್ಯಾರ್ಥಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಈ ಸಂಬಂಧ ಪ್ರಿನ್ಸಿಪಾಲ್ ಮತ್ತು ವಾರ್ಡನ್ ಗೆ ದೂರು ನೀಡಿದರು ಕ್ರಮ ತೆಗೆದುಕೊಳ್ಳದ ಹಿನ್ನೆಲೆಯಲ್ಲಿ ಕೊನೆಗೆ ಸಂತ್ರಸ್ತ ವಿದ್ಯಾರ್ಥಿ ಪೋಷಕರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ಬಟ್ಟೆ ಬಿಚ್ಚಿಸಿ ನೃತ್ಯ ಮಾಡಿಸಿ ಹಲ್ಲೆ ನಡೆಸಿ ವಿಕೃತಿ ಮೆರೆದಿದ್ದಾರೆ ಎಂದು ದೂರು ನೀಡಿದ್ದಾರೆ. ಈ ಸಂಬಂಧ ಐವರು ವಿದ್ಯಾರ್ಥಿಗಳು, ಶಾಲೆಯ ಪ್ರಿನ್ಸಿಪಾಲ್ ಮತ್ತು ವಾರ್ಡನ್ ವಿರುದ್ದ ಎಫ್ಐಆರ್ ದಾಖಲಾಗಿದೆ.
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್

