ಹೊಸದಾಗಿ ಹಾಸ್ಟೆಲ್​​​ಗೆ ಬಂದ ವಿದ್ಯಾರ್ಥಿಗೆ ರ್ಯಾಗಿಂಗ್, ದೂರು ನೀಡಿದ್ದಕ್ಕೆ ಬೆತ್ತಲೆಗೊಳಿಸಿ ವಿಕೃತಿ

Updated on: Sep 10, 2025 | 6:19 PM

ಬೆಂಗಳೂರಿನಲ್ಲೊಂದು ಅಮಾನವೀಯ ಕೃತ್ಯ ನಡೆದಿದೆ. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಹತ್ತನೇ ತರಗತಿ ವಿದ್ಯಾರ್ಥಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಪೊಲೀಸ್‌ ಠಾಣಾ ವ್ಯಾಪ್ತಿಯ ಖಾಸಗಿ ಶಾಲಾ ಹಾಸ್ಟೆಲ್ ನಲ್ಲಿ ನಡೆದಿದೆ.10 ಕ್ಲಾಸ್ ವಿದ್ಯಾರ್ಥಿಯೋರ್ವ ಹೊಸದಾಗಿ ಹಾಸ್ಟೆಲ್​ ಗೆ ಸೇರಿಕೊಂಡಿದ್ದ. ಆದ್ರೆ, ಸಿನೀಯರ್​​ ಗಳು ರ್ಯಾಗಿಂಗ್ ಮಾಡಿದ್ದಾರೆ.

ಬೆಂಗಳೂರು, (ಸೆಪ್ಟೆಂಬರ್ 10): ಬೆಂಗಳೂರಿನಲ್ಲೊಂದು ಅಮಾನವೀಯ ಕೃತ್ಯ ನಡೆದಿದೆ. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಹತ್ತನೇ ತರಗತಿ ವಿದ್ಯಾರ್ಥಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಪೊಲೀಸ್‌ ಠಾಣಾ ವ್ಯಾಪ್ತಿಯ ಖಾಸಗಿ ಶಾಲಾ ಹಾಸ್ಟೆಲ್ ನಲ್ಲಿ ನಡೆದಿದೆ.10 ಕ್ಲಾಸ್ ವಿದ್ಯಾರ್ಥಿಯೋರ್ವ ಹೊಸದಾಗಿ ಹಾಸ್ಟೆಲ್​ ಗೆ ಸೇರಿಕೊಂಡಿದ್ದ. ಆದ್ರೆ, ಸಿನೀಯರ್​​ ಗಳು ರ್ಯಾಗಿಂಗ್ ಮಾಡಿದ್ದಾರೆ. ಇದರಿಂದ ನೊಂದ ವಿದ್ಯಾರ್ಥಿ, ವಾರ್ಡನ್ ಹಾಗೂ ಪ್ರಿನ್ಸಿಪಾಲ್​ ಗೆ ದೂರು ನೀಡಿದ್ದಾನೆ. ಇದರಿಂದ ಮತ್ತಷ್ಟು ಕೋಪಗೊಂಡ ಸಿನೀಯರ್ ವಿದ್ಯಾರ್ಥಿಗಳು, ಹೊಸ ವಿದ್ಯಾರ್ಥಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಈ ಸಂಬಂಧ ಪ್ರಿನ್ಸಿಪಾಲ್ ಮತ್ತು ವಾರ್ಡನ್ ಗೆ ದೂರು ನೀಡಿದರು ಕ್ರಮ ತೆಗೆದುಕೊಳ್ಳದ ಹಿನ್ನೆಲೆಯಲ್ಲಿ ಕೊನೆಗೆ ಸಂತ್ರಸ್ತ ವಿದ್ಯಾರ್ಥಿ ಪೋಷಕರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ಬಟ್ಟೆ ಬಿಚ್ಚಿಸಿ ನೃತ್ಯ ಮಾಡಿಸಿ ಹಲ್ಲೆ ನಡೆಸಿ ವಿಕೃತಿ ಮೆರೆದಿದ್ದಾರೆ ಎಂದು ದೂರು ನೀಡಿದ್ದಾರೆ. ಈ ಸಂಬಂಧ ಐವರು ವಿದ್ಯಾರ್ಥಿಗಳು, ಶಾಲೆಯ ಪ್ರಿನ್ಸಿಪಾಲ್ ಮತ್ತು ವಾರ್ಡನ್ ವಿರುದ್ದ ಎಫ್​ಐಆರ್ ದಾಖಲಾಗಿದೆ.

Published on: Sep 10, 2025 06:18 PM
Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More