ಸೂರಜ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ; ಗೃಹಸಚಿವ ಪರಮೇಶ್ವರ ಹೇಳಿದ್ದೇನು?
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸದ್ಯ ಜೈಲುಪಾಲಾಗಿರುವ ಜೆಡಿಎಸ್ನ ಪ್ರಜ್ವಲರ್ ರೇವಣ್ಣ ಸಹೋದರ ಸೂರಜ್ ವಿರುದ್ಧವೂ ಇದೀಗ ಲೈಂಗಿಕ ದೌರ್ಜನ್ಯ ಆರೋಪಕ ಕೇಳಿಬಂದಿದೆ. ಈ ಬಗ್ಗೆ ಗೃಹ ಸಚಿವ ಜಿ ಪರಮೇಶ್ವರ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. ಅವರು ಏನು ಹೇಳಿದರು ಎಂಬುದನ್ನು ವಿಡಿಯೋದಲ್ಲಿ ನೋಡಿ.
ಬೆಂಗಳೂರು, ಜೂನ್ 22: ಜೆಡಿಎಸ್ ಎಂಎಲ್ಸಿ ಸೂರಜ್ ರೇವಣ್ಣ (Suraj Revanna Case) ವಿರುದ್ಧ ಸಲಿಂಗ ಕಾಮ, ಅಸಹಜ ಲೈಂಗಿಕ ದೌರ್ಜನ್ಯ (unnatural sexual abuse) ಆರೋಪ ಕೇಳಿಬಂದಿರುವ ಬಗ್ಗೆ ಇದೀಗ ಗೃಹ ಸಚಿವ ಜಿ. ಪರಮೇಶ್ವರ (G Parameshwara) ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸೂರಜ್ ವಿರುದ್ಧ ಕೇಳಿ ಬಂದಿರುವ ಆರೋಪಕ್ಕೆ ಸಂಬಂಧಪಟ್ಟಹಾಗೆ ಇನ್ನೂ ದೂರು ದಾಖಲಾಗಿಲ್ಲ. ಈ ಕುರಿತು ಮಾಧ್ಯಮಗಳಲ್ಲಿ ನೋಡಿದ್ದೇನೆ ಎಂದರು.
ನಮಗೆ ಯಾರೂ ಅಧಿಕೃತ ದೂರು ನೀಡಿಲ್ಲ. ದೂರು ಬಂದ ಕೂಡಲೇ ನಾವು ಕ್ರಮ ತೆಗೆದುಕೊಳ್ಳುತ್ತೇವೆ. ಗೃಹ ಸಚಿವರಿಗೆ ಪತ್ರ ಬರೆದಿದ್ದಾರೆ ಎಂದು ವರದಿಗಳಲ್ಲಿ ಉಲ್ಲೇಖಿಸಲಾಗಿದೆ. ಆದರೆ ನನಗೆ ಯಾವುದೇ ಪತ್ರ ಬಂದಿಲ್ಲ. ಪ್ರಕರಣ ಏನು ಎಂಬುದಾಗಿ ತಿಳಿದುಕೊಂಡು ನಾವು ತನಿಖೆ ಮಾಡುತ್ತೇವೆ. ತನಿಖೆಯನ್ನು ಸಿಐಡಿಗೆ ಕೊಡುವ ಮುನ್ನ ನೈಜತೆ ತಿಳಿದುಕೊಳ್ಳುತ್ತೇವೆ. ಅಧಿಕೃತ ದೂರು ಬಂದ್ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.
ಲೈಂಗಿಕ ದೌರ್ಜನ್ಯ ಹಾಗೂ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸದ್ಯ ಜೈಲಿನಲ್ಲಿದ್ದಾರೆ. ಈ ಸಂದರ್ಭದಲ್ಲಿಯೇ ಅವರ ಸಹೋದರ ಸೂರಜ್ ವಿರುದ್ಧವೂ ಆರೋಪ ಕೇಳಿಬಂದಿದೆ.
ಇದನ್ನೂ ಓದಿ: ಸೂರಜ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ ವ್ಯಕ್ತಿ ವಿರುದ್ಧವೇ ಎಫ್‌ಐಆರ್
ಸೂರಜ್ ರೇವಣ್ಣ ವಿರುದ್ಧ ಸಲಿಂಗ ಕಾಮ ಆರೋಪ ಮಾಡಿ ಅರಕಲಗೂಡಿನ ಜೆಡಿಎಸ್ ಕಾರ್ಯಕರ್ತ ದೂರು ನೀಡಿದ್ದರು. ಆದರೆ, ಸುಳ್ಳು ಆರೋಪ ಮಾಡಿ ಹಣಕ್ಕಾಗಿ ಪೀಡಿಸಿದ್ದಾರೆ ಎಂದು ಸೂರಜ್ ರೇವಣ್ಣ ಆಪ್ತ ಶಿವಕುಮಾರ್ ನೀಡಿದ ದೂರಿನ ಮೇರೆಗೆ ಹೊಳೆನರಸೀಪುರ ನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ ಎಂದು ಶುಕ್ರವಾರ ವರದಿಯಾಗಿತ್ತು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ