ಕುಡಿದ ನಶೆಯಲ್ಲಿ ಏನೇನೋ ಮಾತನಾಡಿದ ಎನ್ನುವ ಕಾರಣಕ್ಕೆ ಹೊಡೆದು ಕೊಂದರು!

| Updated By: ರಮೇಶ್ ಬಿ. ಜವಳಗೇರಾ

Updated on: Jan 22, 2025 | 9:38 PM

ದಾಬಸ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಶಾರದ ಕ್ರಾಸ್ GNS ಬಾರ್ ಆ್ಯಂಡ್ ರೆಸ್ಟೋರೆಂಟ್ ಮುಂಭಾಗದಲ್ಲಿ ನಡೆದ ಗಲಾಟೆಯಲ್ಲಿ ಗಾಯಗೊಂಡಿದ್ದ ವ್ಯಕ್ತಿ ಮೃತಪಟ್ಟಿದ್ದಾನೆ. ಯಾವನಿಗೆ ಸೇರಿದ್ದು ಈ ಬಾರ್ ಎಂದು ಅವಾಚ್ಯ ಶಬ್ಧಗಳಿಂದ ಬೈದ ಎನ್ನುವ ಕಾರಣಕ್ಕೆ ಮೂವರು ಸೇರಿಕೊಂಡು ದೊಣ್ಣೆಯಿಂದ ಮನಸೋ ಇಚ್ಛೆ ಹಲ್ಲೆ ಮಾಡಿದ್ದಾರೆ. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ,

ಬೆಂಗಳೂರು, (ಜನವರಿ 22): ಬೆಂಗಳೂರು ಗ್ರಾಮಾಂತರದ ಬಾರ್​ವೊಂದರಲ್ಲಿ ಕ್ಷುಲ್ಲಕ ಕಾರಣಕ್ಕೆ ನಡೆದಿದ್ದ ಗಲಾಟೆಯಲ್ಲಿ ಹಲ್ಲೆಗೊಳಗಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ. ದಾಬಸ್​ಪೇಟೆಯ ಶಾರದಾ ಕ್ರಾಸ್​​ನ GNS ಬಾರ್​ನಲ್ಲಿ ಜನವರಿ 17ರಂದು ಶ್ರೀರಾಮಪುರದ ಜೈಕುಮಾರ್(38) ಎನ್ನುವರ ಮೇಲೆ ಹಲ್ಲೆ ಗೊಟ್ಟಿಗೆರೆಯ ವಿನೋದ್, ಹರ್ಷಿತ್, ನಾಗೇಂದ್ರ ಸೇರಿಕೊಂಡು ಹಲ್ಲೆ ಮಾಡಿದ್ದರು. ಇದರಿಂದ ಗಾಯಗೊಂಡಿದ್ದ ಜೈಕುಮಾರ್​ನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಿಸದೇ ಜೈಕುಮಾರ್ ಕೊನೆಯುಸಿರೆಳೆದಿದ್ದು, ಇದೀಗ ಆರೋಪಿಗಳ ವಿರುದ್ಧ ದಾಬಸ್​ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಕೇಸ್ ಬುಕ್​ ಆಗುತ್ತಿದ್ದಂತೆಯೇ ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗೆ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ.