Former CM in Hubballi; ಮಂಗಳೂರಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ, ಪ್ರಕರಣ ದಾಖಲಾಗಿದೆ: ಬಸವರಾಜ ಬೊಮ್ಮಾಯಿ

Former CM in Hubballi; ಮಂಗಳೂರಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ, ಪ್ರಕರಣ ದಾಖಲಾಗಿದೆ: ಬಸವರಾಜ ಬೊಮ್ಮಾಯಿ

ಅರುಣ್​ ಕುಮಾರ್​ ಬೆಳ್ಳಿ
|

Updated on: May 25, 2023 | 11:43 AM

ಕಾಂಗ್ರೆಸ್ ದ್ವೇಷದ ರಾಜಕಾರಣ ಮಾಡಲಿದೆ ಅಂತ ಗೊತ್ತಿತ್ತು ಅಂತ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು

ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡುವಾಗ ಕಾಂಗ್ರೆಸ್ ದ್ವೇಷದ ರಾಜಕಾರಣ (vendetta politics) ಮಾಡಲಿದೆ ಅಂತ ಗೊತ್ತಿತ್ತು ಅಂತ ಹೇಳಿದರು. ಕಾಂಗ್ರೆಸ್ ಪಕ್ಷ ಅಧಿಕಾರ ಬಂದ ಬಳಿಕ ಮಂಗಳೂರಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ನಡೆದ ಹಲ್ಲೆಯ ಬಗ್ಗೆ ಪ್ರತಿಕ್ರಿಯಿಸಿದ ಶಿಗ್ಗಾಂವಿ ಶಾಸಕ, ಹಲ್ಲೆಗೆ ಸಂಬಂಧಿಸಿದಂತೆ ಈಗಾಗಲೇ ಪ್ರಕರಣ ದಾಖಲಾಗಿದೆ, ಕಾನೂನಿನ ಪ್ರಕಾರ ಕ್ರಮಗಳನ್ನು ಜರುಗಿಸಬೇಕು ಅಂತ ಹೇಳಿದರು. ಸಚಿವ ಎಂಬಿ ಪಾಟೀಲ್ (MB Patil) ಪಿಎಸ್ ಐ ಪ್ರಕರಣವನ್ನು ಪುನಃ ಓಪನ್ ಮಾಡುವುದಾಗಿ ಹೇಳಿದ್ದನ್ನು ಬೊಮ್ಮಾಯಿ ಗಮನಕ್ಕೆ ತಂದಾಗ, ಆ ವಿಷಯದ ಕುರಿತು ಈಗಾಗಲೇ ಪ್ರತಿಕ್ರಿಯೆ ನೀಡಿದ್ದೇನೆ ಅಂತ ಹೇಳಿ ಅಲ್ಲಿಂದ ಹೊರಟರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ