ತಾನು ಕೆಲಸ ಮಾಡಿದ ಆಫೀಸಿಗೇ 91 ಲಕ್ಷ ರೂ. ಕನ್ನ! ಆರೋಪಿ ಕ್ಯಾಶಿಯರ್ ಅಂದರ್

Updated on: Feb 27, 2026 | 3:10 PM

ಸದಾಶಿವನಗರದಲ್ಲಿರುವ ಬಿಲ್ಡರ್ ನರಸಿಂಹ ಅವರ ಕಚೇರಿಯಲ್ಲಿ ನಡೆದ 91.76 ಲಕ್ಷ ರೂಪಾಯಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಸದಾಶಿವನಗರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಕಚೇರಿಯ ಕ್ಯಾಶಿಯರ್ ಆಗಿ ಕೆಲಸ ಮಾಡುತ್ತಿದ್ದ ಧನಂಜಯ್ ಮತ್ತು ಅವನ ಸ್ನೇಹಿತ ಪ್ರವೀಣ್ ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ. ಪೊಲೀಸರ ತನಿಖೆಯಿಂದಾಗಿ ಆರೋಪಿಗಳನ್ನು ಬಂಧಿಸಲಾಗಿದ್ದು, ಕಳ್ಳತನವಾದ ಒಟ್ಟು 91,76,000 ರೂಪಾಯಿಗಳ ಪೈಕಿ 81,66,000 ರೂಪಾಯಿಗಳನ್ನು ವಸೂಲಿ ಮಾಡಲಾಗಿದೆ. ಇನ್ನೂ ಇಬ್ಬರು ಆರೋಪಿಗಳು ಪತ್ತೆಯಾಗಬೇಕಿದ್ದು, ಅವರ ಬಂಧನಕ್ಕಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ತಾಂತ್ರಿಕ ಆಧಾರಗಳ ಮೇಲೆ ತನಿಖೆ ನಡೆಸಿ, ಬಹುಬೇಗ ಹಣವನ್ನು ವಸೂಲಿ ಮಾಡಿದ ಸದಾಶಿವನಗರ ಪೊಲೀಸರ ತಂಡದ ಕಾರ್ಯಕ್ಕೆ ಸೀಮಂತ್ ಕುಮಾರ್ ಸಿಂಗ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು, ಫೆಬ್ರವರಿ 27: ಸದಾಶಿವನಗರದಲ್ಲಿರುವ ಬಿಲ್ಡರ್ ನರಸಿಂಹ ಅವರ ಕಚೇರಿಯಲ್ಲಿ ನಡೆದ 91.76 ಲಕ್ಷ ರೂಪಾಯಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಸದಾಶಿವನಗರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಕಚೇರಿಯ ಕ್ಯಾಶಿಯರ್ ಆಗಿ ಕೆಲಸ ಮಾಡುತ್ತಿದ್ದ ಧನಂಜಯ್ ಮತ್ತು ಅವನ ಸ್ನೇಹಿತ ಪ್ರವೀಣ್ ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ. ಪೊಲೀಸರ ತನಿಖೆಯಿಂದಾಗಿ ಆರೋಪಿಗಳನ್ನು ಬಂಧಿಸಲಾಗಿದ್ದು, ಕಳ್ಳತನವಾದ ಒಟ್ಟು 91,76,000 ರೂಪಾಯಿಗಳ ಪೈಕಿ 81,66,000 ರೂಪಾಯಿಗಳನ್ನು ವಸೂಲಿ ಮಾಡಲಾಗಿದೆ. ಇನ್ನೂ ಇಬ್ಬರು ಆರೋಪಿಗಳು ಪತ್ತೆಯಾಗಬೇಕಿದ್ದು, ಅವರ ಬಂಧನಕ್ಕಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ತಾಂತ್ರಿಕ ಆಧಾರಗಳ ಮೇಲೆ ತನಿಖೆ ನಡೆಸಿ, ಬಹುಬೇಗ ಹಣವನ್ನು ವಸೂಲಿ ಮಾಡಿದ ಸದಾಶಿವನಗರ ಪೊಲೀಸರ ತಂಡದ ಕಾರ್ಯಕ್ಕೆ ಸೀಮಂತ್ ಕುಮಾರ್ ಸಿಂಗ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More