ಗುರುವಾರದ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿಯನ್ನು ಚರ್ಚಿಸಲಾಗುವುದು: ಸಿದ್ದರಾಮಯ್ಯ, ಸಿಎಂ
ಸಿಎಂ ಸಿದ್ದರಾಮಯ್ಯ ಆಗಾಗ್ಗೆ ಮಾಧ್ಯಮದವರ ಮೇಲೆ ರೇಗುವುದು ಹೊಸದೇನಲ್ಲ, ಇವತ್ತು ಸಹ ಅಂಥ ಪ್ರಸಂಗ ನಡೆಯಿತು. ಜಾತಿಗಣತಿಯ ಬಗ್ಗೆ ಪ್ರಶ್ನೆ ಕೇಳುತ್ತಿದ್ದ ಪರ್ತಕರ್ತರೊಬ್ಬರ ಮೇಲೆ ಮುಖ್ಯಮಂತ್ರಿ ವಿನಾಕಾರಣ ರೇಗಿದರು. ಆದರೆ, ಜಾತಿಗಣತಿ ವರದಿಯನ್ನು ಸಾರ್ವಜನಿಕಗೊಳಿಸುವಿದಕ್ಕೆ ಸಂಬಂಧಿಸಿದಂತೆ ಅವರ ಸರ್ಕಾರ ಮೀನಮೇಷ ಎಣಿಸುತ್ತಿದೆ.
ಬೆಂಗಳೂರು, ಏಪ್ರಿಲ್ 14: ಸಂವಿಧಾನ ಶಿಲ್ಪಿ ಡಾ ಬಿಅರ್ ಅಂಬೇಡ್ಕರ್ ಜಯಂತಿ (Dr BR Ambedkar birth anniversary) ಪ್ರಯುಕ್ತ ಇಂದು ವಿಧಾನಸೌಧದ ಆವರಣದಲ್ಲಿರುವ ಅವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾತಿಗಣತಿ ವರದಿ ಕುರಿತು ಬಿಜೆಪಿ ನಾಯಕರು ಮಾಡುತ್ತಿರುವ ಅರೋಪಗಳಿಗೆ ಸಮಂಜಸ ಉತ್ತರ ನೀಡಲಿಲ್ಲ. ಗುರುವಾರದಂದು ನಡೆಯುವ ಕ್ಯಾಬಿನೆಟ್ ಮೀಟಿಂಗ್ ನಲ್ಲಿ ವರದಿಯ ಬಗ್ಗೆ ಚರ್ಚೆ ನಡೆಸಲಾಗುವುದು ಅದಾದ ಬಳಿಕವೇ ಬಿಜೆಪಿ ನಾಯಕರು ಕೇಳುತ್ತಿರುವ ಪ್ರಶ್ನೆಗಳಿಗೆ ಉತ್ತರಿಸುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದರು.
ಇದನ್ನೂ ಓದಿ: ರಾಜಣ್ಣ ಹಾಗೂ ಸುರೇಶ್ ಜೊತೆ ಆರ್ಸಿಬಿ ಮತ್ತು ಡಿಸಿ ನಡುವಿನ ಪಂದ್ಯ ವೀಕ್ಷಿಸಿದ ಸಿಎಂ ಸಿದ್ದರಾಮಯ್ಯ
ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ
Latest Videos