AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSLCಯಲ್ಲೂ ಇಷ್ಟು ಪ್ರಶ್ನೆ ಇರಲ್ಲ, ಆಯೋಗದವರಿಗೆ ತಲೆ ಇಲ್ಲವಾ: ಆರ್‌ ಅಶೋಕ್‌ ಕಿಡಿ

SSLCಯಲ್ಲೂ ಇಷ್ಟು ಪ್ರಶ್ನೆ ಇರಲ್ಲ, ಆಯೋಗದವರಿಗೆ ತಲೆ ಇಲ್ಲವಾ: ಆರ್‌ ಅಶೋಕ್‌ ಕಿಡಿ

ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on: Oct 04, 2025 | 6:27 PM

Share

ರಾಜ್ಯದ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯ ಸಂಕೀರ್ಣ ಪ್ರಶ್ನೆಗಳ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ವಿಪಕ್ಷ ನಾಯಕ ಆರ್. ಅಶೋಕ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. SSLCಯಲ್ಲೂ ಇಷ್ಟು ಪ್ರಶ್ನೆ ಇರಲ್ಲ, ಆಯೋಗದವರಿಗೆ ತಲೆ ಇಲ್ಲವಾ ಎಂದು ಕಿಡಿಕಾರಿದ್ದಾರೆ.

ವಿಜಯಪುರ, ಅಕ್ಟೋಬರ್​ 04: ಎಸ್​​​ಎಸ್​​ಎಲ್​​ಸಿಯಲ್ಲೂ ಇಷ್ಟು ಪ್ರಶ್ನೆ ಇರಲ್ಲ, ಆಯೋಗದವರಿಗೆ ತಲೆ ಇಲ್ಲವಾ ಎಂದು ವಿಪಕ್ಷ ನಾಯಕ ಆರ್‌.ಅಶೋಕ್ (R Ashoka) ವಾಗ್ದಾಳಿ ಮಾಡಿದ್ದಾರೆ. ಜಿಲ್ಲೆಯ ಆಲಮೇಲ ತಾಲೂಕಿನ ದೇವಣಗಾಂವ್ ಗ್ರಾಮದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಾನ ಮರ್ಯಾದೆ ಇಟ್ಟುಕೊಂಡು ಪ್ರಶ್ನೆಗಳನ್ನು ಸೇರಿಸಬೇಕಿತ್ತು. ಹಳ್ಳಿಯಲ್ಲಿರೋ ಕೂಲಿ ಮಾಡುವವರಿಗೆ ಇಷ್ಟು ಪ್ರಶ್ನೆಗಳನ್ನು ಕೇಳಿದ್ರೆ ಹೇಗೆ? ಡಿಸಿಎಂ ಡಿ.ಕೆ.ಶಿವಕುಮಾರ್‌ಗೇ ಪ್ರಶ್ನೆಗಳಿಗೆ ಉತ್ತರಿಸಲು ಆಗಲ್ಲ, ಇನ್ನು ಸಾಮಾನ್ಯರಿಗೆ ಉತ್ತರ ಕೊಡಲು ಆಗತ್ತಾ ಎಂದು ಪ್ರಶ್ನಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
Ashok Yadalli
Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More