Video: ಮನೆಗೆ ಬಂದು ಬ್ಯಾಂಕ್ ಮ್ಯಾನೇಜರ್​​ ಮೇಲೆ ಹಲ್ಲೆ ನಡೆಸಿ ಪರಾರಿಯಾದ ಮುಸುಕುಧಾರಿಗಳು

Updated on: Aug 31, 2025 | 12:56 PM

ಮೂವರು ಮುಸುಕುಧಾರಿಗಳು ಬ್ಯಾಂಕ್ ಮ್ಯಾನೇಜರ್ ಮನೆಗೆ ಬಂದು ಥಳಿಸಿ ಪರಾರಿಯಾಗಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.ನಂಬರ್ ಪ್ಲೇಟ್ ಇಲ್ಲದ ಕಾರಿನಲ್ಲಿ ಬಂದ ಮೂವರು ದುಷ್ಕರ್ಮಿಗಳು, ಮ್ಯಾನೇಜರ್ ಅವರನ್ನು ಹೊರಗೆ ಕರೆದು ಹಲ್ಲೆ ನಡೆಸುತ್ತಿರುವುದನ್ನು ಸಿಸಿಟಿವಿ ದೃಶ್ಯಾವಳಿಗಳು ಸೆರೆಹಿಡಿದಿವೆ. ಬಾಗಿಲು ಲಾಕ್ ಮಾಡಿ ಒಳಗೆ ಓಡಿ ಹೋಗುವ ಮೂಲಕ ತನ್ನನ್ನು ತಾನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.ಪೊಲೀಸರು ಪ್ರಕರಣ ದಾಖಲಿಸಿಕೊಂಡು ಸಿಸಿಟಿವಿ ಸಾಕ್ಷ್ಯಗಳನ್ನು ಬಳಸಿಕೊಂಡು ತನಿಖೆ ಆರಂಭಿಸಿದ್ದಾರೆ. ದಾಳಿಕೋರರನ್ನು ಶೀಘ್ರದಲ್ಲೇ ಗುರುತಿಸಿ ಬಂಧಿಸಲಾಗುವುದು ಎಂದು ಎಸ್‌ಎಚ್‌ಒ ಗುರ್ತೇಜ್ ಸಿಂಗ್ ಹೇಳಿದ್ದಾರೆ.

ಪಂಜಾಬ್, ಆಗಸ್ಟ್​ 31: ಮೂವರು ಮುಸುಕುಧಾರಿಗಳು ಬ್ಯಾಂಕ್ ಮ್ಯಾನೇಜರ್ ಮನೆಗೆ ಬಂದು ಥಳಿಸಿ ಪರಾರಿಯಾಗಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.ನಂಬರ್ ಪ್ಲೇಟ್ ಇಲ್ಲದ ಕಾರಿನಲ್ಲಿ ಬಂದ ಮೂವರು ದುಷ್ಕರ್ಮಿಗಳು, ಮ್ಯಾನೇಜರ್ ಅವರನ್ನು ಹೊರಗೆ ಕರೆದು ಹಲ್ಲೆ ನಡೆಸುತ್ತಿರುವುದನ್ನು ಸಿಸಿಟಿವಿ ದೃಶ್ಯಾವಳಿಗಳು ಸೆರೆಹಿಡಿದಿವೆ. ಬಾಗಿಲು ಲಾಕ್ ಮಾಡಿ ಒಳಗೆ ಓಡಿ ಹೋಗುವ ಮೂಲಕ ತನ್ನನ್ನು ತಾನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.ಪೊಲೀಸರು ಪ್ರಕರಣ ದಾಖಲಿಸಿಕೊಂಡು ಸಿಸಿಟಿವಿ ಸಾಕ್ಷ್ಯಗಳನ್ನು ಬಳಸಿಕೊಂಡು ತನಿಖೆ ಆರಂಭಿಸಿದ್ದಾರೆ. ದಾಳಿಕೋರರನ್ನು ಶೀಘ್ರದಲ್ಲೇ ಗುರುತಿಸಿ ಬಂಧಿಸಲಾಗುವುದು ಎಂದು ಎಸ್‌ಎಚ್‌ಒ ಗುರ್ತೇಜ್ ಸಿಂಗ್ ಹೇಳಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ