Video: ಕ್ಯಾಮೆರಾ ಮುಂದೆಯೇ ವಕೀಲನ ಶೂಟೌಟ್, ಪರಾರಿಯಾಗಲು ಯತ್ನಿಸಿದ ಹಂತಕನಿಗೆ ಕೈಕೊಟ್ಟ ಬೈಕ್
: ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಶನಿವಾರ ಬೆಳಗ್ಗೆ ರಕ್ತಪಾತ ನಡೆದಿದೆ. ಹಿರಿಯ ವಕೀಲರೊಬ್ಬರನ್ನು ಗುರಿಯಾಗಿಸಿಕೊಂಡು ಬಂದ ಇಬ್ಬರು ಹಂತಕರು, ಸಾರ್ವಜನಿಕರ ಕಣ್ಣೆದುರೇ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ. ಆದರೆ, ಈ ಕೊಲೆಯ ನಂತರ ಹಂತಕರು ಅಲ್ಲಿಂದ ತಪ್ಪಿಸಿಕೊಳ್ಳಲು ನಡೆಸಿದ ಹರಸಾಹಸ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. 40 ವರ್ಷದ ಹಿರಿಯ ವಕೀಲ ರಾಜೀವ್ ಸಿಂಗ್ ಅವರು ಪ್ರತಿದಿನದಂತೆ ಶನಿವಾರ ಬೆಳಿಗ್ಗೆ ಕೂಡ ವಾಯುವಿಹಾರಕ್ಕೆ ಹೊರಟಿದ್ದರು. ಈ ವೇಳೆ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಅವರನ್ನು ಹಿಂಬಾಲಿಸಿದ್ದಾರೆ.
ಮಿರ್ಜಾಪುರ, ಏಪ್ರಿಲ್ 12: ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಶನಿವಾರ ಬೆಳಗ್ಗೆ ರಕ್ತಪಾತ ನಡೆದಿದೆ. ಹಿರಿಯ ವಕೀಲರೊಬ್ಬರನ್ನು ಗುರಿಯಾಗಿಸಿಕೊಂಡು ಬಂದ ಇಬ್ಬರು ಹಂತಕರು, ಸಾರ್ವಜನಿಕರ ಕಣ್ಣೆದುರೇ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ. ಆದರೆ, ಈ ಕೊಲೆಯ ನಂತರ ಹಂತಕರು ಅಲ್ಲಿಂದ ತಪ್ಪಿಸಿಕೊಳ್ಳಲು ನಡೆಸಿದ ಹರಸಾಹಸ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
40 ವರ್ಷದ ಹಿರಿಯ ವಕೀಲ ರಾಜೀವ್ ಸಿಂಗ್ ಅವರು ಪ್ರತಿದಿನದಂತೆ ಶನಿವಾರ ಬೆಳಿಗ್ಗೆ ಕೂಡ ವಾಯುವಿಹಾರಕ್ಕೆ ಹೊರಟಿದ್ದರು. ಈ ವೇಳೆ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಅವರನ್ನು ಹಿಂಬಾಲಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ, ಬೈಕ್‌ನ ಹಿಂಬದಿಯಲ್ಲಿ ಕುಳಿತಿದ್ದ ವ್ಯಕ್ತಿ ಇಳಿದು ಬಂದು, ಅತೀ ಸಮೀಪದಿಂದ ರಾಜೀವ್ ಸಿಂಗ್ ಅವರ ಮೇಲೆ ಗುಂಡು ಹಾರಿಸಿದ್ದಾನೆ. ಗುಂಡು ತಗುಲಿದ ತಕ್ಷಣ ಸಿಂಗ್ ಅವರು ಸ್ಥಳದಲ್ಲೇ ಕುಸಿದು ಬಿದ್ದು ಪ್ರಾಣ ಬಿಟ್ಟಿದ್ದಾರೆ.
ಕೊಲೆ ಮಾಡಿದ ನಂತರ ಹಂತಕನು ಓಡಿಹೋಗಿ ಬೈಕ್ ಹತ್ತಿದ್ದಾನೆ. ಆದರೆ, ವಿಧಿಯಾಟ ಎನ್ನುವಂತೆ ಹಂತಕರು ತಪ್ಪಿಸಿಕೊಳ್ಳಬೇಕಿದ್ದ ಆ ಮೋಟಾರ್ ಸೈಕಲ್ ಸರಿಯಾದ ಸಮಯಕ್ಕೆ ಸ್ಟಾರ್ಟ್ ಆಗಲೇ ಇಲ್ಲ. ಬೈಕ್ ಚಲಾಯಿಸುತ್ತಿದ್ದ ವ್ಯಕ್ತಿ ಗಾಡಿಯನ್ನು ಸ್ಟಾರ್ಟ್ ಮಾಡಲು ನಿರಂತರವಾಗಿ ಪೆಡಲ್ ಅನ್ನು ಒದೆಯುತ್ತಿರುವುದು ವಿಡಿಯೋದಲ್ಲಿ ಸ್ಪಷ್ಟವಾಗಿ ಕಾಣುತ್ತದೆ.
ಗುಂಡಿನ ಸದ್ದು ಕೇಳಿ ಸ್ಥಳೀಯರು ಹಂತಕರತ್ತ ಧಾವಿಸಲು ಪ್ರಯತ್ನಿಸಿದಾಗ , ಮತ್ತೊಬ್ಬ ಹಂತಕ ತನ್ನ ಪಿಸ್ತೂಲ್ ಅನ್ನು ಜನರತ್ತ ತೋರಿಸಿ ಬೆದರಿಸಿದ್ದಾನೆ. ಇದರಿಂದ ಭಯಭೀತರಾದ ಜನ ದೂರ ಉಳಿಯಬೇಕಾಯಿತು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್ ಕೈ ಹಿಡಿದ ಪಕ್ಷಗಳಾವುವು

