ಆಟೋಗೆ ಗುದ್ದಿದ ಬಸ್: ಮಗು ಸೇರಿ 6 ಜನ ಸಾವು, ಅಪಘಾತದ ಭೀಕರ ದೃಶ್ಯ ಇಲ್ಲಿದೆ

Edited By:

Updated on: Aug 28, 2025 | 4:54 PM

ಕರ್ನಾಟಕ ಹಾಗೂ ಕೇರಳ ಗಡಿಭಾಗದಲ್ಲಿ ಭೀಕರ ಅಪಘಾತ (Road accident) ಸಂಭವಿಸಿ 6 ಮಂದಿ ಮೃತಪಟ್ಟಿದ್ದಾರೆ. ಇಲ್ಲಿನ ಉಳ್ಳಾಲದ ತಲಪಾಡಿ ಟೋಲ್ ಗೇಟ್ ಬಳಿ ಇಂದು ಮಧ್ಯಾಹ್ನ ಬಸ್ ಆಟೋಗೆ ಗುದ್ದಿದ್ದು, ಮಗು ಸೇರಿ ಆರು ಜನರು ಸಾವನ್ನಪ್ಪಿದ್ದಾರೆ. ಕೆಸಿ ರೋಡ್‌ನಿಂದ ತೆರಳುತ್ತಿದ್ದ ಆಟೋ ರಿಕ್ಷಾ ಹಾಗೂ ಬಸ್ ಮಧ್ಯೆ ಭೀಕರ ಅಪಘಾತ ಸಂಭವಿಸಿದೆ. ಬಸ್ಸುಇದ್ದಕಿದ್ದಂತೆ ಆಟೋಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಆಟೋ ನಜ್ಜುಗುಜ್ಜಾಗಿದೆ. ಬಸ್‌ ಚಾಲಕನ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎನ್ನಲಾಗಿದೆ. ಈ ಸಂಬಂಧ ಮಂಜೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರು, (ಆಗಸ್ಟ್​ 28): ಕರ್ನಾಟಕ ಹಾಗೂ ಕೇರಳ ಗಡಿಭಾಗದಲ್ಲಿ ಭೀಕರ ಅಪಘಾತ (Road accident) ಸಂಭವಿಸಿ 6 ಮಂದಿ ಮೃತಪಟ್ಟಿದ್ದಾರೆ. ಇಲ್ಲಿನ ಉಳ್ಳಾಲದ ತಲಪಾಡಿ ಟೋಲ್ ಗೇಟ್ ಬಳಿ ಇಂದು ಮಧ್ಯಾಹ್ನ ಬಸ್ ಆಟೋಗೆ ಗುದ್ದಿದ್ದು, ಮಗು ಸೇರಿ ಆರು ಜನರು ಸಾವನ್ನಪ್ಪಿದ್ದಾರೆ. ಕೆಸಿ ರೋಡ್‌ನಿಂದ ತೆರಳುತ್ತಿದ್ದ ಆಟೋ ರಿಕ್ಷಾ ಹಾಗೂ ಬಸ್ ಮಧ್ಯೆ ಭೀಕರ ಅಪಘಾತ ಸಂಭವಿಸಿದೆ. ಬಸ್ಸುಇದ್ದಕಿದ್ದಂತೆ ಆಟೋಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಆಟೋ ನಜ್ಜುಗುಜ್ಜಾಗಿದೆ. ಬಸ್‌ ಚಾಲಕನ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎನ್ನಲಾಗಿದೆ. ಈ ಸಂಬಂಧ ಮಂಜೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Loading...
Unable to load recommendations.
Follow Us
ಅಶೋಕ್​ ಪೂಜಾರಿ

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸ್ಥಳೀಯ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಖಾಸಗಿ ಸುದ್ದಿ ವಾಹಿನಿಯಲ್ಲಿ ಉಡುಪಿ ಜಿಲ್ಲಾ ವರದಿಗಾರರಾಗಿ ಕೆಲಕಾಲ ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ ನಂತರ ಟಿವಿ9 ಸುದ್ದಿ ವಾಹಿನಿಯಲ್ಲಿ ಉತ್ತರ ಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ indiatelevision.com 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More