AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ 1.85 ಕೆಜಿ ಚಿನ್ನ ಕಳ್ಳತನ: ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ ನೋಡಿ

ಬೆಂಗಳೂರಿನಲ್ಲಿ 1.85 ಕೆಜಿ ಚಿನ್ನ ಕಳ್ಳತನ: ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ ನೋಡಿ

ರಮೇಶ್ ಬಿ. ಜವಳಗೇರಾ
|

Updated on: May 20, 2026 | 3:53 PM

Share

ಮಲ್ಲೇಶ್ವರಂನ ನಗರತ್ ಪೇಟೆಯ ಪ್ರಸಿದ್ಧ ಮೆಹ್ತಾ ಜ್ಯುವೆಲ್ಲರಿಯಿಂದ 1.85 ಕೆಜಿ ಚಿನ್ನಾಭರಣಗಳನ್ನು ದೋಚಿ ಮೂವರು ಖದೀಮರು ಪರಾರಿಯಾಗಿದ್ದಾರೆ. ಇನ್ನು ಖದೀಮರು ಬ್ಯಾಗ್ ನಲ್ಲಿ ಚಿನ್ನ ತುಂಬಿಕೊಂಡು ಎಸ್ಕೇಪ್ ಆಗಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬಳಿಕ ಮೆಹ್ತಾ ಜುವೆಲ್ಲರಿ ಮಾಲೀಕ ಮಹೇಂದ್ರ ಜೈನ್ ಮಲ್ಲೇಶ್ವರಂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ದೂರು ದಾಖಲಿಸಿಕೊಂಡಿರುವ ಪೊಲೀಸರು, ತನಿಖೆ ಕೈಗೊಂಡಿದ್ದಾರೆ.

ಬೆಂಗಳೂರು, (ಮೇ 20): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ಪಕ್ಕಾ ಸಿನಿಮೀಯ ಶೈಲಿಯಲ್ಲಿ ಖದೀಮರು ಬರೋಬ್ಬರಿ ಸುಮಾರು 3 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣವನ್ನು  ದೋಚಿಕೊಂಡು ಹೋಗಿರುವ ಘಟನೆ ನಡೆದಿದೆ. ಹೋಲ್‌ಸೇಲ್ ದರದಲ್ಲಿ ಚಿನ್ನ ಖರೀದಿಸುವುದಾಗಿ ನಂಬಿಸಿ, ಮಲ್ಲೇಶ್ವರಂನ ನಗರತ್ ಪೇಟೆಯ ಪ್ರಸಿದ್ಧ ಮೆಹ್ತಾ ಜ್ಯುವೆಲ್ಲರಿಯಿಂದ 1.85 ಕೆಜಿ ಚಿನ್ನಾಭರಣಗಳನ್ನು ದೋಚಿ ಮೂವರು ಖದೀಮರು ಪರಾರಿಯಾಗಿದ್ದಾರೆ. ಇನ್ನು ಖದೀಮರು ಬ್ಯಾಗ್ ನಲ್ಲಿ ಚಿನ್ನ ತುಂಬಿಕೊಂಡು ಎಸ್ಕೇಪ್ ಆಗಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬಳಿಕ ಮೆಹ್ತಾ ಜುವೆಲ್ಲರಿ ಮಾಲೀಕ ಮಹೇಂದ್ರ ಜೈನ್ ಮಲ್ಲೇಶ್ವರಂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ದೂರು ದಾಖಲಿಸಿಕೊಂಡಿರುವ ಪೊಲೀಸರು, ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ: ಇದು ಪಕ್ಕಾ ಸಿನಿಮೀಯ ವಂಚನೆ! ಡಿಸೈನ್ ಸೆಲೆಕ್ಟ್ ಮಾಡಿ ಫೋಟೋ ತೆಗೆಯೋ ನೆಪದಲ್ಲಿ 3 ಕೋಟಿ ರೂ. ಚಿನ್ನಾಭರಣ ದೋಚಿ ಖದೀಮರು ಪರಾರಿ

Follow Us
Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More