Video: ಪೆಟ್ರೋಲ್ ಬಂಕ್ನಲ್ಲಿ ಕಾಯುತ್ತಿದ್ದಾಗಲೇ ದಿಢೀರ್ ಹೃದಯಾಘಾತ; ಕುಸಿದು ಬಿದ್ದು ಶಿಕ್ಷಕ ಸಾವು
ಪೆಟ್ರೋಲ್ ಬಂಕ್ನಲ್ಲಿ ಪೆಟ್ರೋಲ್ ತುಂಬಿಸಿಕೊಳ್ಳಲು ಸರದಿ ಸಾಲಿನಲ್ಲಿ ನಿಂತು ಕಾಯುತ್ತಿರುವ ವೇಳೆ ಶಿಕ್ಷಕರೊಬ್ಬರು ಏಕಾಏಕಿ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.
ಇತ್ತೀಚಿನ ದಿನಗಳಲ್ಲಿ ಹಠಾತ್ ಹೃದಯ ಸ್ತಂಭನದಿಂದ ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿವೆ. ಹೃದಯ ಸ್ತಂಭನಗಳು ಎಲ್ಲಿ, ಯಾವುದೇ ಸಮಯದಲ್ಲಿ ಬೇಕಾದರೂ ಸಂಭವಿಸುತ್ತವೆ. ಇದೀಗ ಅಂತದ್ದೇ ಘಟನೆ ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ವಿಡಿಯೋದಲ್ಲಿ ಪೆಟ್ರೋಲ್ ಪಂಪ್‌ನಲ್ಲಿ ಪೆಟ್ರೋಲ್ ತುಂಬಿಸಿಕೊಳ್ಳಲು ಬಂದ ವ್ಯಕ್ತಿಯೊರ್ವ ಏಕಾಏಕಿ ಕುಸಿದು ಬಿದ್ದಿರುವುದನ್ನು ಕಾಣಬಹುದು. ಮೃತ ವ್ಯಕ್ತಿ ಬಾಬಾಸಾಹೇಬ್ ಮಿಸಲ್ ಎಂದು ಗುರುತಿಸಲಾಗಿದ್ದು, ಇವರು ಶಿಕ್ಷಕರಾಗಿದ್ದರು ಎಂದು ತಿಳಿದುಬಂದಿದೆ. ಏಕಾಏಕಿ ಸರದಿ ಸಾಲಿನಲ್ಲಿ ನಿಂತಿದ್ದ ಶಿಕ್ಷಕ ಕುಸಿದು ಬಿದ್ದಿರುವುದನ್ನು ಕಂಡು ಪೆಟ್ರೋಲ್ ಪಂಪ್ ಸಿಬ್ಬಂದಿಗಳು ಆಘಾತಕೊಳ್ಳಲಾಗಿದ್ದಾರೆ. ತಕ್ಷಣ ಏನು ಮಾಡಬೇಕು ಎಂದು ತೋಚದೆ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಆಸ್ಪತ್ರೆ ದಾಖಲಾಗುವಷ್ಟರಲ್ಲೇ ಶಿಕ್ಷರು ಮೃತಪಟ್ಟಿರುವುದಾಗಿ ವರದಿಯಾಗಿದೆ.
ಇದನ್ನೂ ಓದಿ: ಕ್ಲಾಸ್ ರೂಮ್ನಲ್ಲೇ ನಿದ್ದೆಗೆ ಜಾರಿದ ಶಿಕ್ಷಕಿ, ಬೀಸಣಿಗೆಯಿಂದ ಗಾಳಿ ಹಾಕಿದ ಪುಟ್ಟ ಮಕ್ಕಳು: ವಿಡಿಯೋ ನೋಡಿ
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Jul 30, 2024 10:57 AM
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್ ಆಪರೇಷನ್ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ

