Video: ಪೆಟ್ರೋಲ್ ಬಂಕ್​ನಲ್ಲಿ ಕಾಯುತ್ತಿದ್ದಾಗಲೇ ದಿಢೀರ್ ಹೃದಯಾಘಾತ; ಕುಸಿದು ಬಿದ್ದು ಶಿಕ್ಷಕ ಸಾವು

Updated on: Jul 30, 2024 | 12:07 PM

ಪೆಟ್ರೋಲ್ ಬಂಕ್​ನಲ್ಲಿ ಪೆಟ್ರೋಲ್ ತುಂಬಿಸಿಕೊಳ್ಳಲು ಸರದಿ ಸಾಲಿನಲ್ಲಿ ನಿಂತು ಕಾಯುತ್ತಿರುವ ವೇಳೆ ಶಿಕ್ಷಕರೊಬ್ಬರು ಏಕಾಏಕಿ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​ ಆಗಿದೆ.

ಇತ್ತೀಚಿನ ದಿನಗಳಲ್ಲಿ ಹಠಾತ್ ಹೃದಯ ಸ್ತಂಭನದಿಂದ ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿವೆ. ಹೃದಯ ಸ್ತಂಭನಗಳು ಎಲ್ಲಿ, ಯಾವುದೇ ಸಮಯದಲ್ಲಿ ಬೇಕಾದರೂ ಸಂಭವಿಸುತ್ತವೆ. ಇದೀಗ ಅಂತದ್ದೇ ಘಟನೆ ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ವಿಡಿಯೋದಲ್ಲಿ ಪೆಟ್ರೋಲ್ ಪಂಪ್‌ನಲ್ಲಿ ಪೆಟ್ರೋಲ್ ತುಂಬಿಸಿಕೊಳ್ಳಲು ಬಂದ ವ್ಯಕ್ತಿಯೊರ್ವ ಏಕಾಏಕಿ ಕುಸಿದು ಬಿದ್ದಿರುವುದನ್ನು ಕಾಣಬಹುದು. ಮೃತ ವ್ಯಕ್ತಿ ಬಾಬಾಸಾಹೇಬ್ ಮಿಸಲ್ ಎಂದು ಗುರುತಿಸಲಾಗಿದ್ದು, ಇವರು ಶಿಕ್ಷಕರಾಗಿದ್ದರು ಎಂದು ತಿಳಿದುಬಂದಿದೆ. ಏಕಾಏಕಿ ಸರದಿ ಸಾಲಿನಲ್ಲಿ ನಿಂತಿದ್ದ ಶಿಕ್ಷಕ ಕುಸಿದು ಬಿದ್ದಿರುವುದನ್ನು ಕಂಡು ಪೆಟ್ರೋಲ್ ಪಂಪ್‌ ಸಿಬ್ಬಂದಿಗಳು ಆಘಾತಕೊಳ್ಳಲಾಗಿದ್ದಾರೆ. ತಕ್ಷಣ ಏನು ಮಾಡಬೇಕು ಎಂದು ತೋಚದೆ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಆಸ್ಪತ್ರೆ ದಾಖಲಾಗುವಷ್ಟರಲ್ಲೇ ಶಿಕ್ಷರು ಮೃತಪಟ್ಟಿರುವುದಾಗಿ ವರದಿಯಾಗಿದೆ.

ಇದನ್ನೂ ಓದಿ: ಕ್ಲಾಸ್​​ ರೂಮ್​​ನಲ್ಲೇ ನಿದ್ದೆಗೆ ಜಾರಿದ ಶಿಕ್ಷಕಿ, ಬೀಸಣಿಗೆಯಿಂದ ಗಾಳಿ ಹಾಕಿದ ಪುಟ್ಟ ಮಕ್ಕಳು: ವಿಡಿಯೋ ನೋಡಿ

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​​ ಮಾಡಿ

Published on: Jul 30, 2024 10:57 AM
Loading...
Unable to load recommendations.
Follow Us
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More