Cauvery Water Dispute: ಕದ್ದುಮುಚ್ಚಿ ತಮಿಳುನಾಡಿಗೆ ಕಾವೇರಿ ನೀರು ಬಿಡೋ ಆರೋಪಕ್ಕೆ ಏನಂದ್ರು ಸಚಿವ ರಾಮಲಿಂಗಾ ರೆಡ್ಡಿ?

Edited By:

Updated on: Jul 31, 2026 | 12:49 PM

ಕಾವೇರಿ ನದಿ ನೀರಿನ ವಿವಾದ ತೀವ್ರಗೊಂಡಿದ್ದು, ಬಿಜೆಪಿ ಸೇರಿದಂತೆ ವಿವಿಧ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆ ರಾಜಕೀಯ ಪ್ರೇರಿತ ಎಂದು ಜಲಸಂಪನ್ಮೂಲ ಸಚಿವ ರಾಮಲಿಂಗಾ ರೆಡ್ಡಿ ಅಭಿಪ್ರಾಯಪಟ್ಟಿದ್ದಾರೆ. ಪ್ರಸ್ತುತ ರಾಜ್ಯದಲ್ಲಿ ಕುಡಿಯುವ ನೀರಿಗೂ ತೊಂದರೆಯಾಗಿದ್ದು, ಮಳೆಯ ಅಭಾವದಿಂದಾಗಿ ಜಲಾಶಯಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದೆ. ಇಂತಹ ಸಂಕಷ್ಟದ ಪರಿಸ್ಥಿತಿಯ ನಡುವೆಯೂ, ಸಿಡಬ್ಲ್ಯೂಎಂಎ ಆದೇಶದಂತೆ ತಮಿಳುನಾಡಿಗೆ 3,500 ಕ್ಯೂಸೆಕ್ಸ್‌, ಅಂದರೆ ಸುಮಾರು 3.5 ಟಿಎಂಸಿ ನೀರನ್ನು ಬಿಡಲಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಇದು ಮಾಮೂಲಿ ನದಿಗಳಿಗೆ ಬಿಡುವ ಸಣ್ಣ ಪ್ರಮಾಣದ ನೀರು ಮಾತ್ರ ಎಂದಿದ್ದಾರೆ.

ಬೆಂಗಳೂರು, ಜುಲೈ 31: ಕಾವೇರಿ ನದಿ ನೀರಿನ ವಿವಾದ ತೀವ್ರಗೊಂಡಿದ್ದು, ಬಿಜೆಪಿ ಸೇರಿದಂತೆ ವಿವಿಧ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆ ರಾಜಕೀಯ ಪ್ರೇರಿತ ಎಂದು ಜಲಸಂಪನ್ಮೂಲ ಸಚಿವ ರಾಮಲಿಂಗಾ ರೆಡ್ಡಿ ಅಭಿಪ್ರಾಯಪಟ್ಟಿದ್ದಾರೆ. ಪ್ರಸ್ತುತ ರಾಜ್ಯದಲ್ಲಿ ಕುಡಿಯುವ ನೀರಿಗೂ ತೊಂದರೆಯಾಗಿದ್ದು, ಮಳೆಯ ಅಭಾವದಿಂದಾಗಿ ಜಲಾಶಯಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದೆ.

ಕರ್ನಾಟಕದ ನಿಲುವು ಬಹಳ ಸ್ಪಷ್ಟವಾಗಿದ್ದು, ಮುಖ್ಯಮಂತ್ರಿಗಳು ಈಗಾಗಲೇ ರಾಜ್ಯದ ಹಿತಾಸಕ್ತಿ ಕಾಯುವ ಬಗ್ಗೆ ಭರವಸೆ ನೀಡಿದ್ದಾರೆ. ಅಲ್ಲದೆ, ಸೆಪ್ಟೆಂಬರ್ 3 ರಂದು ಎಲ್ಲ ವಿರೋಧ ಪಕ್ಷಗಳ ನಾಯಕರನ್ನು ಒಳಗೊಂಡ ಸರ್ವಪಕ್ಷಗಳ ಸಭೆಯನ್ನು ಕರೆದಿದ್ದಾರೆ. ಈ ಸಭೆಯಲ್ಲಿ ಕಾವೇರಿ ವಿಚಾರದಲ್ಲಿ ಮುಂದಿನ ಕಾರ್ಯತಂತ್ರ ಮತ್ತು ನಿರ್ಧಾರಗಳ ಕುರಿತು ಚರ್ಚಿಸಲಾಗುವುದು ಎಂದು ಸಚಿವರು ಹೇಳಿದ್ದಾರೆ. “ನಮ್ಮ ರೈತರ ಹಿತಾಸಕ್ತಿಯನ್ನು ಕಾಪಾಡುವ ನಿಲುವನ್ನು ಸರ್ಕಾರ ತೆಗೆದುಕೊಂಡಿರುವುದರಿಂದ ಸದ್ಯಕ್ಕೆ ಯಾವುದೇ ಹೋರಾಟದ ಅವಶ್ಯಕತೆ ಇಲ್ಲ” ಎಂದು ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More