ಕಾವೇರಿ ವಿವಾದ; ಹಿರಿಯ ನಟ ಅನಂತ್ ನಾಗ್ ಫುಲ್ ಗರಂ, ಇಲ್ಲಿದೆ ವಿಡಿಯೋ

Edited By: ಕಿರಣ್ ಹನುಮಂತ್​ ಮಾದಾರ್

Updated on: Sep 20, 2023 | 9:37 PM

ಡಿಎಂಕೆ ಜೊತೆ ಮಾತನಾಡಿ ಕಾಂಗ್ರೆಸ್ ಕಾವೇರಿ ವಿವಾದ ಬಗೆಹರಿಸಿಲ್ಲ ಎಂದು ಬೆಂಗಳೂರಿನಲ್ಲಿ ಸ್ಯಾಂಡಲ್​ವುಡ್ ಹಿರಿಯ ನಟ ಅನಂತನಾಗ್(AnanthNag) ಕಿಡಿಕಾರಿದ್ದಾರೆ. ಬ್ರಿಟಿಷರ ಆಳ್ವಿಕೆ ಇದ್ದಾಗ ತಮಿಳುನಾಡಿಗೆ ಹೆಚ್ಚು ನೀರು ಬಿಡುವ ಉಲ್ಲೇಖವಾಗಿತ್ತು. ಇದನ್ನು ಸರಿಮಾಡುವ ಕೆಲಸ ಆಗಲೇ ಇಲ್ಲ ಎಂದಿದ್ದಾರೆ.

ಬೆಂಗಳೂರು, ಸೆ.20: ತಮಿಳುನಾಡಿಗೆ 5000 ಕ್ಯೂಸೆಕ್ ನೀರು ಹರಿಸುವಂತೆ CWMA ಆದೇಶ ವಿಚಾರ ‘ಕಳೆದ 60 ವರ್ಷಗಳಿಂದಲೂ ಕಾವೇರಿ ಗಲಾಟೆ ನೋಡುತ್ತಾ ಬಂದಿದ್ದೇವೆ. ಡಿಎಂಕೆ ಜೊತೆ ಮಾತನಾಡಿ ಕಾಂಗ್ರೆಸ್ ಕಾವೇರಿ ವಿವಾದ ಬಗೆಹರಿಸಿಲ್ಲ ಎಂದು ಬೆಂಗಳೂರಿನಲ್ಲಿ ಸ್ಯಾಂಡಲ್​ವುಡ್ ಹಿರಿಯ ನಟ ಅನಂತನಾಗ್(AnanthNag) ಕಿಡಿಕಾರಿದ್ದಾರೆ. ಬ್ರಿಟಿಷರ ಆಳ್ವಿಕೆ ಇದ್ದಾಗ ತಮಿಳುನಾಡಿಗೆ ಹೆಚ್ಚು ನೀರು ಬಿಡುವ ಉಲ್ಲೇಖವಾಗಿತ್ತು. ಇದನ್ನು ಸರಿಮಾಡುವ ಕೆಲಸ ಆಗಲೇ ಇಲ್ಲ. ಕಾವೇರಿ ನೀರಿನ ವಿಚಾರವಾಗಿ 15 ವರ್ಷಗಳಿಂದ ಗಲಾಟೆ ಹೆಚ್ಚಾಗಿದೆ. ಇದು ತಮಿಳುನಾಡಿನ ಡಿಎಂಕೆ ಪಾರ್ಟಿ ಮಾಡುತ್ತಿರುವ ಸಮಸ್ಯೆ. ನಾವೆಲ್ಲರೂ ಕನ್ನಡಿಗರು, ಎಲ್ಲರೂ ಒಗ್ಗಟ್ಟಾಗಿ ಹೋರಾಟ ಮಾಡಬೇಕು ಎಂದರು. ಅವರು ಕರ್ನಾಟಕವನ್ನ ಪಾಕಿಸ್ತಾನ ಅಥವಾ ಶ್ರೀಲಂಕಾ ಎಂದುಕೊಂಡಿದ್ದಾರೆ ಎಂದು ಕಿಡಿಕಾರಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಾಲತೇಶ ಜಗ್ಗೀನ್

ಮಾಲತೇಶ ಜಗ್ಗೀನ್. Tv9 ಕನ್ನಡ ವಾಹಿನಿ ಫಿಲಂ ಬ್ಯೂರೋ ಮುಖ್ಯಸ್ಥನಾಗಿ ಕೆಲಸ ಮಾಡ್ತಿದ್ದಾರೆ. ಮಾಲತೇಶ ವಿಜಯನಗರ ಜಿಲ್ಲೆ ಹೂವಿನ ಹಡಗಲಿ ತಾಲ್ಲೂಕು ಹೊಳಲು ಗ್ರಾಮದವರು. ಕಳೆದ 15 ವರ್ಷಗಳಲ್ಲಿ ಮಾಧ್ಯಮ ಲೋಕದ ವಿವಿಧ ವಿಭಾಗಗಳಲ್ಲಿ ವರದಿಗಾರಿಕೆ ಮಾಡಿದ ಅನುಭವ ಇದೆ. ಸಿನಿಮಾ ವಿಭಾಗದ ಜೊತೆ ರಾಜಕೀಯ, ಮೆಟ್ರೋ, ಕ್ರೈಂ ವಿಭಾಗದಲ್ಲೂ ಕೆಲವು ಸನ್ನಿವೇಶಗಳಲ್ಲಿ ವರದಿಗಾರಿಕೆ ಮಾಡಿದ್ದಾರೆ. ಹಾವೇರಿಯ ಕೆಎಫ್ ಚಾನಲ್ , ನಂತರ ಬೆಂಗಳೂರಿನ ಸಮಯ ನ್ಯೂಸ್, ಜನಶ್ರಿ ನ್ಯೂಸ್, ಪಬ್ಲಿಕ್ ಟಿವಿ ಸೇರಿದಂತೆ ವಿವಿಧ ವಾಹಿನಿಗಳಲ್ಲಿ ಕೆಲಸ ಮಾಡಿದ ಅನುಭವ ಇದೆ. Tv9kannada ನ್ಯೂಸ್ ಚಾನಲ್ ನಲ್ಲಿ ಕಳೆದ 10 ವರ್ಷಗಳಿಂದ ಇದ್ದಾರೆ. ಕಲೆ, ಸಾಹಿತ್ಯ, ಸಿನಿಮಾ, ಕ್ರಿಡೆ ಆಸಕ್ತಿ ವಿಷಯಗಳು.

Read More