AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಷರತ್ತು ವಿಧಿಸಿ ಕೆಆರ್​ಎಸ್ ​​ ಜಲಾಶಯದಿಂದ ಮಂಡ್ಯ ನಾಲೆಗಳಿಗೆ ನೀರು ಬಿಡುಗಡೆ

ಷರತ್ತು ವಿಧಿಸಿ ಕೆಆರ್​ಎಸ್ ​​ ಜಲಾಶಯದಿಂದ ಮಂಡ್ಯ ನಾಲೆಗಳಿಗೆ ನೀರು ಬಿಡುಗಡೆ

ಪ್ರಶಾಂತ್​ ಬಿ.
| Edited By: |

Updated on: Aug 10, 2023 | 11:26 AM

Share

Cauvery Irrigation Corporation: ಕೆಆರ್​ಎಸ್​​ ಜಲಾಶಯದಲ್ಲಿ ನೀರಿನ ಸಂಗ್ರಹಣೆ ಕಡಿಮೆಯಿರುವ ಹಿನ್ನೆಲೆಯಲ್ಲಿ ಕಟ್ಟು ಪದ್ಧತಿಯಲ್ಲಿ ನಾಲೆಗಳಿಗೆ ನೀರು ಹರಿಸಲು ನಿರ್ಧಾರ ಮಾಡಲಾಗಿದೆ. ಪ್ರಮುಖ ಬೆಳೆ ಬೆಳೆದು ನಷ್ಟವಾದರೆ ಇಲಾಖೆ ಜವಾಬ್ದಾರಿಯಲ್ಲ ಎಂದೂ ಕಾವೇರಿ ನೀರಾವರಿ ನಿಗಮ ಜಿಲ್ಲೆಯ ರೈತರಿಗೆ ಎಚ್ಚರಿಕೆ ನೀಡಿದೆ.

ಮಂಡ್ಯ, ಆಗಸ್ಟ್​​ 10: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್​ಎಸ್ ಅಣೆಕಟ್ಟಯಿಂದ ಇಂದಿನಿಂದಲೇ KRS ವ್ಯಾಪ್ತಿಯ ನಾಲೆಗಳಿಗೆ ನೀರು ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ. ಆದರೆ ನೀರಾವರಿ ಸಲಹಾ ಸಮಿತಿ (Cauvery Irrigation Corporation) ಸಭೆ ನಿರ್ಣಯದಂತೆ ಷರತ್ತು ವಿಧಿಸಿ ಕೆಆರ್​ಎಸ್​ನಿಂದ ನಾಲೆಗಳಿಗೆ ನೀರು ಬಿಡುಗಡೆ (KRS Dam Water Release) ಮಾಡಲಾಗುವುದು. ಇದರಿಂದ ರೈತರು (Mandya Farmers) ತಕ್ಷಣಕ್ಕೆ ಸಮಾಧಾನದ ನಿಟ್ಟುಸಿರುಬಿಟ್ಟಿದ್ದಾರೆ.

Cauvery Irrigation Corporation – ಏನವು ಷರತ್ತುಗಳು?

ದೀರ್ಘಾವಧಿ ಬೆಳೆ ಬೆಳೆಯದಂತೆ ರೈತರಿಗೆ ಅಧಿಕಾರಿಗಳು ಸ್ಪಷ್ಟ ಸೂಚನೆ ನೀಡಿದ್ದಾರೆ. 15 ದಿನ ನೀರು ಹರಿಸಿ, 15 ದಿನ ಸ್ಥಗಿತಗೊಳಿಸಲು ತೀರ್ಮಾನಿಸಲಾಗಿದೆ. ಕೆಆರ್​ಎಸ್​​ ಜಲಾಶಯದಲ್ಲಿ ನೀರಿನ ಸಂಗ್ರಹಣೆ ಕಡಿಮೆಯಿರುವ ಹಿನ್ನೆಲೆಯಲ್ಲಿ ಕಟ್ಟು ಪದ್ಧತಿಯಲ್ಲಿ ನಾಲೆಗಳಿಗೆ ನೀರು ಹರಿಸಲು ನಿರ್ಧಾರ ಮಾಡಲಾಗಿದೆ. ಪ್ರಮುಖ ಬೆಳೆ ಬೆಳೆದು ನಷ್ಟವಾದರೆ ಇಲಾಖೆ ಜವಾಬ್ದಾರಿಯಲ್ಲ ಎಂದೂ ಕಾವೇರಿ ನೀರಾವರಿ ನಿಗಮ ಜಿಲ್ಲೆಯ ರೈತರಿಗೆ ಎಚ್ಚರಿಕೆ ನೀಡಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Prashantha B
Prashantha B

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More