ಷರತ್ತು ವಿಧಿಸಿ ಕೆಆರ್ಎಸ್ ಜಲಾಶಯದಿಂದ ಮಂಡ್ಯ ನಾಲೆಗಳಿಗೆ ನೀರು ಬಿಡುಗಡೆ
Cauvery Irrigation Corporation: ಕೆಆರ್ಎಸ್ ಜಲಾಶಯದಲ್ಲಿ ನೀರಿನ ಸಂಗ್ರಹಣೆ ಕಡಿಮೆಯಿರುವ ಹಿನ್ನೆಲೆಯಲ್ಲಿ ಕಟ್ಟು ಪದ್ಧತಿಯಲ್ಲಿ ನಾಲೆಗಳಿಗೆ ನೀರು ಹರಿಸಲು ನಿರ್ಧಾರ ಮಾಡಲಾಗಿದೆ. ಪ್ರಮುಖ ಬೆಳೆ ಬೆಳೆದು ನಷ್ಟವಾದರೆ ಇಲಾಖೆ ಜವಾಬ್ದಾರಿಯಲ್ಲ ಎಂದೂ ಕಾವೇರಿ ನೀರಾವರಿ ನಿಗಮ ಜಿಲ್ಲೆಯ ರೈತರಿಗೆ ಎಚ್ಚರಿಕೆ ನೀಡಿದೆ.
ಮಂಡ್ಯ, ಆಗಸ್ಟ್ 10: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಅಣೆಕಟ್ಟಯಿಂದ ಇಂದಿನಿಂದಲೇ KRS ವ್ಯಾಪ್ತಿಯ ನಾಲೆಗಳಿಗೆ ನೀರು ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ. ಆದರೆ ನೀರಾವರಿ ಸಲಹಾ ಸಮಿತಿ (Cauvery Irrigation Corporation) ಸಭೆ ನಿರ್ಣಯದಂತೆ ಷರತ್ತು ವಿಧಿಸಿ ಕೆಆರ್ಎಸ್ನಿಂದ ನಾಲೆಗಳಿಗೆ ನೀರು ಬಿಡುಗಡೆ (KRS Dam Water Release) ಮಾಡಲಾಗುವುದು. ಇದರಿಂದ ರೈತರು (Mandya Farmers) ತಕ್ಷಣಕ್ಕೆ ಸಮಾಧಾನದ ನಿಟ್ಟುಸಿರುಬಿಟ್ಟಿದ್ದಾರೆ.
Cauvery Irrigation Corporation – ಏನವು ಷರತ್ತುಗಳು?
ದೀರ್ಘಾವಧಿ ಬೆಳೆ ಬೆಳೆಯದಂತೆ ರೈತರಿಗೆ ಅಧಿಕಾರಿಗಳು ಸ್ಪಷ್ಟ ಸೂಚನೆ ನೀಡಿದ್ದಾರೆ. 15 ದಿನ ನೀರು ಹರಿಸಿ, 15 ದಿನ ಸ್ಥಗಿತಗೊಳಿಸಲು ತೀರ್ಮಾನಿಸಲಾಗಿದೆ. ಕೆಆರ್ಎಸ್ ಜಲಾಶಯದಲ್ಲಿ ನೀರಿನ ಸಂಗ್ರಹಣೆ ಕಡಿಮೆಯಿರುವ ಹಿನ್ನೆಲೆಯಲ್ಲಿ ಕಟ್ಟು ಪದ್ಧತಿಯಲ್ಲಿ ನಾಲೆಗಳಿಗೆ ನೀರು ಹರಿಸಲು ನಿರ್ಧಾರ ಮಾಡಲಾಗಿದೆ. ಪ್ರಮುಖ ಬೆಳೆ ಬೆಳೆದು ನಷ್ಟವಾದರೆ ಇಲಾಖೆ ಜವಾಬ್ದಾರಿಯಲ್ಲ ಎಂದೂ ಕಾವೇರಿ ನೀರಾವರಿ ನಿಗಮ ಜಿಲ್ಲೆಯ ರೈತರಿಗೆ ಎಚ್ಚರಿಕೆ ನೀಡಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ