ಕಾವೇರಿ ಜಲ ವಿವಾದ: ಮಂಡ್ಯದ ಕೆಆರ್​​ಎಸ್​​ ಬಳಿ ಬಿಜೆಪಿಗರಿಂದ ಬೃಹತ್​​ ಪ್ರತಿಭಟನೆ

Edited By:

Updated on: Jul 31, 2026 | 1:00 PM

ತಮಿಳುನಾಡಿಗೆ ಕಾವೇರಿ ನೀರು ಹರಿಸಬೇಕೆಂಬ ಆದೇಶವನ್ನು ಖಂಡಿಸಿ ಮಂಡ್ಯದ ಕೆಆರ್‌ಎಸ್ (KRS) ಜಲಾಶಯದ ಬಳಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಬಿಜೆಪಿ ಪ್ರಮುಖ ನಾಯಕರು ಭಾರಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಂಜಯ ಸರ್ಕಲ್​ನಲ್ಲಿ ರೈತರು ಮತ್ತು ಕನ್ನಡ ಸಂಘಟನೆಗಳ ಧರಣಿ ನಡೆಸಿದ್ದರೆ, ಕಾವೇರಿ ಹೋರಾಟಕ್ಕೆ ಪಡಿತರ ವಿತರಕರ ಸಂಘವೂ ಬೆಂಬಲ ನೀಡಿದೆ.

ಮಂಡ್ಯ, ಜುಲೈ 31: ನೀರು ಹರಿಸಬೇಕೆಂಬ CWMA ಆದೇಶ ಖಂಡಿಸಿ ಮಂಡ್ಯದಲ್ಲಿ ಪ್ರತಿಭಟನೆ ಕಾವು ತೀವ್ರಗೊಂಡಿದೆ. ಸಂಜಯ ಸರ್ಕಲ್​ನಲ್ಲಿ ರೈತರು ಮತ್ತು ಕನ್ನಡ ಸಂಘಟನೆಗಳ ಧರಣಿ ನಡೆಸಿದ್ದರೆ, ಕಾವೇರಿ ಹೋರಾಟಕ್ಕೆ ಪಡಿತರ ವಿತರಕರ ಸಂಘವೂ ಬೆಂಬಲ ನೀಡಿದೆ. ಬೆಂಗಳೂರು-ಮೈಸೂರು ಹಳೆಯ ಹೆದ್ದಾರಿಯಲ್ಲಿ ಕೂತು ಪ್ರತಿಭಟನೆ ನಡೆಸುವ ಮೂಲಕ ಆಕ್ರೋಶ ವ್ಯಕ್ತಪಡಿಸಲಾಗಿದೆ. ಮತ್ತೊಂದೆಡೆ ಶ್ರೀರಂಗಪಟ್ಟಣ ತಾಲೂಕಿನ ​ಎಸ್​ನಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆಯಲ್ಲಿ ಮಾಜಿ ಸಿಎಂ ಬಿ.ಎಸ್​.ಯಡಿಯೂರಪ್ಪ, ವಿಪಕ್ಷ ನಾಯಕ ಆರ್​.ಅಶೋಕ್, ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ​ಸೇರಿ ಪ್ರಮುಖರು ಭಾಗಿಯಾಗಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ದಿಲೀಪ್​, ಚೌಡಹಳ್ಳಿ

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸಿದ್ದೇನೆ. ಸಧ್ಯ ಮಂಡ್ಯ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More