ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು: ಮಹತ್ವದ ವಿಡಿಯೋ ರಿಲೀಸ್​​ ಮಾಡಿದ ಕಾಂಗ್ರೆಸ್​​ ಶಾಸಕ

Edited By:

Updated on: Jul 28, 2026 | 4:54 PM

Cauvery Row:ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಆದೇಶಿಸಿರುವ ಬೆನ್ನಲ್ಲೇ, ತಮಿಳುನಾಡಿನ ಚಿದಂಬರಂ ಬಳಿ ಕಾವೇರಿ ನದಿ ನೀರು ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಸ್ಫೋಟಕ ವಿಡಿಯೋವನ್ನು ಬಿಡುಗಡೆ ಮಾಡುವ ಮೂಲಕ ಮಂಡ್ಯ ಶಾಸಕ ಗಣಿಗ ರವಿಕುಮಾರ್ ಅವರು ತಮಿಳುನಾಡು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಮಂಡ್ಯ, ಜುಲೈ 28: ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕೆಂಬ CWRC ಆದೇಶದ ನಡುವೆ ಮಂಡ್ಯ ಶಾಸಕ ಗಣಿಗ ರವಿಕುಮಾರ್​​ ವಿಡಿಯೋವೊಂದನ್ನು ಬಿಡುಗಡೆ ಮಾಡಿದ್ದಾರೆ. ತಮಿಳುನಾಡಿನ ಚಿದಂಬರಂನಲ್ಲಿ ಸಮುದ್ರಕ್ಕೆ ವ್ಯರ್ಥವಾಗಿ ಕಾವೇರಿ ನೀರು ಹರಿಯುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ತಮಿಳುನಾಡಿಗೆ ಹೋಗಿದ್ದಾಗ ಗಣಿಗ ರವಿ ಈ ವಿಡಿಯೋ ಮಾಡಿದ್ದರು ಎನ್ನಲಾಗಿದ್ದು, ಮೇಕೆದಾಟು ಯೋಜನೆಗೆ ಸುಮ್ಮನೆ‌ ಕ್ಯಾತೆ ತೆಗೆಯುತ್ತಿದ್ದಾರೆ. ನಾವು ಮೇಕೆದಾಟು ಅಣೆಕಟ್ಟೆ‌ ಕಟ್ಟುತ್ತೇವೆ. ಮೆಟ್ಟೂರಿನ ಜಲಾಶಯದ ನಂತರ ನೀವು ಅಣೆಕಟ್ಟು ಕಟ್ಟಿ ವ್ಯರ್ಥವಾಗಿ ಸಮುದ್ರಕ್ಕೆ ಹರಿಯುವ ನೀರನ್ನ ಉಳಿಸಬಹುದು ಎಂದು ಶಾಸಕರು ಆಡಿರುವ ಮಾತುಗಳು ವಿಡಿಯೋದಲ್ಲಿವೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Jul 28, 2026 04:52 PM
Loading...
Unable to load recommendations.
Follow Us
ದಿಲೀಪ್​, ಚೌಡಹಳ್ಳಿ

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸಿದ್ದೇನೆ. ಸಧ್ಯ ಮಂಡ್ಯ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More