AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾವೇರಿ ನೀರು ವಿವಾದ ನಡುವೆಯೂ ತಮಿಳುನಾಡು ಸಿಎಂ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!

ಕಾವೇರಿ ನೀರು ವಿವಾದ ನಡುವೆಯೂ ತಮಿಳುನಾಡು ಸಿಎಂ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!

Anil Kalkere
| Edited By: |

Updated on: Jul 29, 2026 | 12:53 PM

Share

ತಮಿಳುನಾಡಿನ ಮುಖ್ಯಮಂತ್ರಿ ಜೋಸೆಫ್ ವಿಜಯ್ ಆಗಸ್ಟ್ 3 ರಂದು ಬೆಂಗಳೂರಿಗೆ ಆಗಮಿಸುವ ಸಾಧ್ಯತೆ ಇದೆ. ಕಾವೇರಿ ನದಿ ನೀರು ಹಂಚಿಕೆ ಕುರಿತು ವಿಧಾನಸೌಧದಲ್ಲಿ ಸಭೆ ನಡೆಯಲಿದೆ. ಒಂದು ಕಡೆ ಸಭೆಗೆ ಸಿದ್ಧತೆಗಳು ಭರದಿಂದ ಸಾಗಿದ್ದರೆ, ಮತ್ತೊಂದೆಡೆ ಕಾವೇರಿ ನೀರು ಬಿಡುಗಡೆ ಆದೇಶ ವಿರೋಧಿಸಿ ರಾಜ್ಯಾದ್ಯಂತ ಪ್ರತಿಭಟನೆಗಳು ಜೋರಾಗಿವೆ. ಈ ಬೆಳವಣಿಗೆಗಳ ನಡುವೆ ಸಿಎಂ ವಿಜಯ್ ಭೇಟಿ ಕುತೂಹಲ ಮೂಡಿಸಿದೆ.

ಬೆಂಗಳೂರು, ಜುಲೈ 29: ತಮಿಳುನಾಡಿನ ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಆಗಸ್ಟ್ 3 ರಂದು ಬೆಂಗಳೂರಿಗೆ ಭೇಟಿ ನೀಡುವ ಸಾಧ್ಯತೆ ಇದ್ದು, ಅವರನ್ನು ಸ್ವಾಗತಿಸಲು ಸಿದ್ಧತೆಗಳು ನಡೆಯುತ್ತಿವೆ. ಕಾವೇರಿ ನದಿ ನೀರು ಹಂಚಿಕೆ ಕುರಿತು ಚರ್ಚಿಸಲು ವಿಧಾನಸೌಧದಲ್ಲಿ ಮಹತ್ವದ ಸಭೆ ಆಯೋಜಿಸಲಾಗಿದೆ. ಈ ಸಭೆಗೆ ಮೊದಲು, ವಿಧಾನಸೌಧದ ಸಭಾಂಗಣ ಮತ್ತು ಅದರ ಸುತ್ತಮುತ್ತಲ ಪ್ರದೇಶಗಳಲ್ಲಿ ಭಾರಿ ಸಿದ್ಧತೆಗಳು ನಡೆಯುತ್ತಿವೆ. ಸಿಎಂ ವಿಜಯ್ ಆಗಮಿಸುವ ಮಾರ್ಗದಲ್ಲಿ ಸುಣ್ಣ-ಬಣ್ಣ ಬಳಿಯುವ ಕೆಲಸ, ಸಭಾಂಗಣದಲ್ಲಿ ಆಸನ ವ್ಯವಸ್ಥೆ ಮತ್ತು ನವೀಕರಣ ಕಾರ್ಯ ಭರದಿಂದ ಸಾಗಿದೆ. ಆದರೆ, ಈ ಭೇಟಿ ಮತ್ತು ಸಭೆಯು ಕಾವೇರಿ ನೀರು ವಿವಾದದ ನಡುವೆಯೇ ಆಯೋಜನೆಯಾಗಿದೆ.

ಏತನ್ಮಧ್ಯೆ, ಕಾವೇರಿ ನೀರು ನಿರ್ವಹಣಾ ಸಮಿತಿ ಸೂಚನೆಯಂತೆ ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ ನೀರನ್ನು 15 ದಿನಗಳ ಕಾಲ ಬಿಡುವ ಆದೇಶವನ್ನು ಮಂಡ್ಯ ರೈತರು ಹಾಗೂ ಕನ್ನಡಪರ ಸಂಘಟನೆಗಳು ತೀವ್ರವಾಗಿ ಖಂಡಿಸಿವೆ. ರಾಜ್ಯದಲ್ಲಿ ನೀರಿನ ಕೊರತೆ ಇರುವಾಗ ನೀರು ಬಿಡುಗಡೆ ಅಸಾಧ್ಯ ಎಂದು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಒಂದು ಹನಿ ನೀರು ಬಿಟ್ಟರೂ ರಾಜ್ಯಾದ್ಯಂತ ಬಂದ್ ಕರೆ ನೀಡುವ ಎಚ್ಚರಿಕೆಯನ್ನು ಕನ್ನಡಪರ ಸಂಘಟನೆಗಳು ನೀಡಿವೆ. ಈ ಎಲ್ಲಾ ವಿರೋಧಗಳ ನಡುವೆ ತಮಿಳುನಾಡಿನ ಮುಖ್ಯಮಂತ್ರಿ ಜೋಸೆಫ್ ವಿಜಯ್ ಆಗಸ್ಟ್ 3 ರಂದು ಬೆಂಗಳೂರಿಗೆ ಬರುತ್ತಾರಾ ಎಂಬ ಕುತೂಹಲ ಮೂಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us