ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’ ಪ್ರದರ್ಶನ
ಬೆಂಗಳೂರಿನ ಪ್ರಸಿದ್ಧ ‘ಊರ್ವಶಿ’ ಚಿತ್ರಮಂದಿರದಲ್ಲಿ ತಮಿಳಿನ ‘ಜನ ನಾಯಗನ್’ ಬದಲಿಗೆ ಕನ್ನಡದ ‘ಕರಾವಳಿ’ ಸಿನಿಮಾವನ್ನು ಪ್ರದರ್ಶಿಸಲಾಗುತ್ತಿದೆ. ಕಳೆದ ಒಂದು ವಾರದಿಂದ ಈ ಥಿಯೇಟರ್ನಲ್ಲಿ ‘ಜನ ನಾಯಗನ್’ ಪ್ರದರ್ಶನ ಕಾಣುತ್ತಿತ್ತು. ಆದರೆ ಆಗಸ್ಟ್ 1ರಿಂದ ಈ ಬದಲಾವಣೆ ಮಾಡಲಾಗಿದೆ. ವಿಡಿಯೋ ಇಲ್ಲಿದೆ ನೋಡಿ..
ಕರ್ನಾಟಕ ಮತ್ತು ತಮಿಳುನಾಡು ನಡುವೆ ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ವಿವಾದ ಹೆಚ್ಚಾಗಿದೆ. ಈ ಸಂದರ್ಭದಲ್ಲಿ ತಮಿಳುನಾಡು ಸಿಎಂ ವಿಜಯ್ ನಟನೆಯ ‘ಜನ ನಾಯಗನ್’ (Jana Nayagan) ಸಿನಿಮಾದ ಪ್ರದರ್ಶನಕ್ಕೆ ಕರ್ನಾಟಕದಲ್ಲಿ ವಿರೋಧ ವ್ಯಕ್ತವಾಗಿದೆ. ಜನಾಕ್ರೋಶದ ಬಳಿಕ ಹಲವು ಚಿತ್ರಮಂದಿರಗಳಲ್ಲಿ ಈ ಸಿನಿಮಾದ ಪ್ರದರ್ಶನವನ್ನು ನಿಲ್ಲಿಸಲಾಗಿದೆ. ಬೆಂಗಳೂರಿನ ಪ್ರಸಿದ್ಧ ‘ಊರ್ವಶಿ’ ಚಿತ್ರಮಂದಿರದಲ್ಲಿ ಕೂಡ ‘ಜನ ನಾಯಗನ್’ ಬದಲಿಗೆ ಕನ್ನಡದ ‘ಕರಾವಳಿ’ ಸಿನಿಮಾವನ್ನು ಪ್ರದರ್ಶಿಸಲಾಗುತ್ತಿದೆ. ಕಳೆದ ಒಂದು ವಾರದಿಂದ ‘ಊರ್ವಶಿ’ ಥಿಯೇಟರ್ನಲ್ಲಿ ‘ಜನ ನಾಯಗನ್’ ಪ್ರದರ್ಶನ ಕಾಣುತ್ತಿತ್ತು. ಆದರೆ ಆಗಸ್ಟ್ 1ರಿಂದ ಈ ಬದಲಾವಣೆ ಮಾಡಲಾಗಿದೆ. ಚಿತ್ರಮಂದಿರದ ಮುಂಭಾಗದಲ್ಲಿ ಇದ್ದ ತಮಿಳು ಸಿನಿಮಾದ ಪೋಸ್ಟರ್ಗಳನ್ನು ತೆಗೆದುಹಾಕಲಾಗಿದೆ. ಕಾವೇರಿ ವಿವಾದ ಬಗೆಹರಿಯುವ ತನಕ ಕರ್ನಾಟಕದಲ್ಲಿ ತಮಿಳು ಸಿನಿಮಾಗಳಿಗೆ ಇದೇ ಪರಿಸ್ಥಿತಿ ಮುಂದುವರಿಯುವ ಸಾಧ್ಯತೆ ಇದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us
