AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cauvery Water Dispute: ಚಾಮರಾಜನಗರದಲ್ಲಿ ವಿಜಯ್ ಅಭಿನಯದ 'ಜನನಾಯಗನ್' ಸಿನಿಮಾ ಎತ್ತಂಗಡಿ!

Cauvery Water Dispute: ಚಾಮರಾಜನಗರದಲ್ಲಿ ವಿಜಯ್ ಅಭಿನಯದ ‘ಜನನಾಯಗನ್’ ಸಿನಿಮಾ ಎತ್ತಂಗಡಿ!

ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on:Jul 31, 2026 | 12:34 PM

Share

ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಪ್ರತಿಭಟನೆ ತೀವ್ರಗೊಂಡಿದೆ. ಕಾವೇರಿ ವಿವಾದದ ಹಿನ್ನೆಲೆಯಲ್ಲಿ ನಗರದ ಬಸವೇಶ್ವರ ಚಿತ್ರಮಂದಿರದಲ್ಲಿ ಪ್ರದರ್ಶನಗೊಳ್ಳುತ್ತಿದ್ದ ತಮಿಳುನಾಡು ಸಿಎಂ ಆಕಾಂಕ್ಷಿ, ನಟ ಜೋಸೆಫ್ ವಿಜಯ್ ಅಭಿನಯದ 'ಜನನಾಯಗನ್' (Jananayagan) ಸಿನಿಮಾವನ್ನು ಪ್ರದರ್ಶನದಿಂದ ರದ್ದುಗೊಳಿಸಿ ಎತ್ತಂಗಡಿ ಮಾಡಲಾಗಿದೆ.

ಚಾಮರಾಜನಗರ, ಜುಲೈ 31: ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಪ್ರತಿಭಟನೆ ತೀವ್ರಗೊಂಡಿದೆ. ಕಾವೇರಿ ವಿವಾದದ ಹಿನ್ನೆಲೆಯಲ್ಲಿ ನಗರದ ಬಸವೇಶ್ವರ ಚಿತ್ರಮಂದಿರದಲ್ಲಿ ಪ್ರದರ್ಶನಗೊಳ್ಳುತ್ತಿದ್ದ ತಮಿಳುನಾಡು ಸಿಎಂ ಆಕಾಂಕ್ಷಿ, ನಟ ಜೋಸೆಫ್ ವಿಜಯ್ ಅಭಿನಯದ ‘ಜನನಾಯಗನ್’ (Jananayagan) ಸಿನಿಮಾವನ್ನು ಪ್ರದರ್ಶನದಿಂದ ರದ್ದುಗೊಳಿಸಿ ಎತ್ತಂಗಡಿ ಮಾಡಲಾಗಿದೆ.

ತಮಿಳುನಾಡು ಸರ್ಕಾರದ ಧೋರಣೆ ಖಂಡಿಸಿ ವಿವಿಧ ಕನ್ನಡ ಮತ್ತು ರೈತ ಸಂಘಟನೆಗಳು ಚಿತ್ರಮಂದಿರಕ್ಕೆ ಮುತ್ತಿಗೆ ಹಾಕುವುದಾಗಿ ಖಡಕ್ ಎಚ್ಚರಿಕೆ ನೀಡಿದ್ದವು. ಯಾವುದೇ ಅಹಿತಕರ ಘಟನೆ ನಡೆಯದಂತೆ ಹಾಗೂ ಸ್ಥಳೀಯರ ಆಕ್ರೋಶಕ್ಕೆ ಮಣಿದ ಚಿತ್ರಮಂದಿರದ ಮಾಲೀಕರು ಪ್ರದರ್ಶನವನ್ನು ರದ್ದುಗೊಳಿಸಿದ್ದಾರೆ. ಜಿಲ್ಲೆಯಲ್ಲಿ ಕಾವೇರಿ ಹೋರಾಟದ ಬಿಸಿ ದಿನದಿಂದ ದಿನಕ್ಕೆ ಏರುತ್ತಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Jul 31, 2026 11:54 AM

Follow Us
ಸೂರಜ್ ಪ್ರಸಾದ್ ಎಸ್.ಎನ್
ಸೂರಜ್ ಪ್ರಸಾದ್ ಎಸ್.ಎನ್

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More