ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ

Updated on: Aug 02, 2026 | 5:31 PM

ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಕಾವೇರಿ ನೀರು ಹರಿಸಬಾರದು ಎಂದು ಆಗ್ರಹಗಳು ವ್ಯಕ್ತವಾಗಿದ್ದು, ಕರ್ನಾಟಕ ಬಂದ್​​ಗೆ ಕರೆ ನೀಡಲಾಗಿದೆ. ಆದರೂ ನೀರು ಹರಿಸಲಾಗಿದೆ. ಈ ಬಗ್ಗೆ ಸ್ವತಃ ಸಿಎಂ ಡಿಕೆ ಶಿವಕುಮಾರ್ ಒಪ್ಪಿಕೊಂಡಿದ್ದಾರೆ. ಸರ್ವಪಕ್ಷ ಸಭೆಯ ಬಳಿಕ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಬಿನಿ ಜಲಾಶಯ (Kabini Dam) ಸಂಪೂರ್ಣ ಭರ್ತಿಯಾಗಿದೆ. ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ಎರಡರಿಂದ ಮೂರು ಅಡಿ ಕಾಯ್ದುಕೊಂಡು ನಿನ್ನೆ (ಆಗಸ್ಟ್ 01) ಮಧ್ಯಾಹ್ನದ ನಂತರ ನೀರನ್ನು ಹೊರಗೆ ಬಿಡಲಾಗಿದೆ ಇದುವರೆಗೆ ಯಾವುದೇ ಜಲಾಶಯದಿಂದ ತಮಿಳುನಾಡಿಗೆ ನೀರು ಬಿಟ್ಟಿರಲಿಲ್ಲ. ಆದರೆ ಕಬಿನಿ ಜಲಾಶಯದ ಸುರಕ್ಷತೆಯ ದೃಷ್ಟಿಯಿಂದ ನೀರು ಹರಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.

ಬೆಂಗಳೂರು, (ಆಗಸ್ಟ್ 02): ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಕಾವೇರಿ ನೀರು ಹರಿಸಬಾರದು ಎಂದು ಆಗ್ರಹಗಳು ವ್ಯಕ್ತವಾಗಿದ್ದು, ಕರ್ನಾಟಕ ಬಂದ್​​ಗೆ ಕರೆ ನೀಡಲಾಗಿದೆ.  ಈ ಬಗ್ಗೆ ಸ್ವತಃ ಸಿಎಂ ಡಿಕೆ ಶಿವಕುಮಾರ್ ಒಪ್ಪಿಕೊಂಡಿದ್ದಾರೆ. ಸರ್ವಪಕ್ಷ ಸಭೆಯ ಬಳಿಕ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಬಿನಿ ಜಲಾಶಯ (Kabini Dam) ಸಂಪೂರ್ಣ ಭರ್ತಿಯಾಗಿದೆ. ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ಎರಡರಿಂದ ಮೂರು ಅಡಿ ಕಾಯ್ದುಕೊಂಡು ನಿನ್ನೆ (ಆಗಸ್ಟ್ 01) ಮಧ್ಯಾಹ್ನದ ನಂತರ ನೀರನ್ನು ಹೊರಗೆ ಬಿಡಲಾಗಿದೆ ಇದುವರೆಗೆ ಯಾವುದೇ ಜಲಾಶಯದಿಂದ ತಮಿಳುನಾಡಿಗೆ ನೀರು ಬಿಟ್ಟಿರಲಿಲ್ಲ. ಆದರೆ ಕಬಿನಿ ಜಲಾಶಯದ ಸುರಕ್ಷತೆಯ ದೃಷ್ಟಿಯಿಂದ ನೀರು ಹರಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More